250 ಹಾಸಿಗೆ ಜಿಲ್ಲಾಸ್ಪತ್ರೆಯಲ್ಲಿ ಹೃದಯ ಚಿಕಿತ್ಸಾ ಘಟಕ ಸ್ಥಾಪನೆಗೆ ಅನುಮೋದನೆ
ಹೊಸಪೇಟೆ, 06 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ವಿಜಯನಗರ, ಬಳ್ಳಾರಿ ಹಾಗೂ ಕೊಪ್ಪಳ ಜಿಲ್ಲೆಗಳನ್ನೊಳಗೊಂಡಂತೆ ಜಿಲ್ಲೆಯ ಹೊಸಪೇಟೆ ನಗರದ 250 ಹಾಸಿಗೆ ಜಿಲ್ಲಾಸ್ಪತ್ರೆಯಲ್ಲಿ 20 ಹಾಸಿಗೆಗಳ ಹೃದಯ ಚಿಕಿತ್ಸಾ ಘಟಕ ಸ್ಥಾಪಿಸಲು ಸರ್ಕಾರದಿಂದ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವುದನ್ನು ಹೊಸಪೇಟೆ ಶ
250 ಹಾಸಿಗೆ ಜಿಲ್ಲಾಸ್ಪತ್ರೆಯಲ್ಲಿ ಹೃದಯ ಚಿಕಿತ್ಸಾ ಘಟಕ ಸ್ಥಾಪನೆಗೆ ಅನುಮೋದನೆ


ಹೊಸಪೇಟೆ, 06 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ವಿಜಯನಗರ, ಬಳ್ಳಾರಿ ಹಾಗೂ ಕೊಪ್ಪಳ ಜಿಲ್ಲೆಗಳನ್ನೊಳಗೊಂಡಂತೆ ಜಿಲ್ಲೆಯ ಹೊಸಪೇಟೆ ನಗರದ 250 ಹಾಸಿಗೆ ಜಿಲ್ಲಾಸ್ಪತ್ರೆಯಲ್ಲಿ 20 ಹಾಸಿಗೆಗಳ ಹೃದಯ ಚಿಕಿತ್ಸಾ ಘಟಕ ಸ್ಥಾಪಿಸಲು ಸರ್ಕಾರದಿಂದ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವುದನ್ನು ಹೊಸಪೇಟೆ ಶಾಸಕ ಎಚ್.ಆರ್. ಗವಿಯಪ್ಪನವರು ಶ್ಲಾಘಿಸಿದ್ದಾರೆ.

ಸತತ 2 ವರ್ಷಗಳ ನಿರಂತರ ಪ್ರಯತ್ನದ ಫಲವಾಗಿ ಸಚಿವ ಸಂಪುಟ ಸಭೆಯಲ್ಲಿ ವಿಜಯನಗರ ಜಿಲ್ಲೆ ಹೊಸಪೇಟೆಯ 250 ಹಾಸಿಗೆ ಜಿಲ್ಲಾಸ್ಪತ್ರೆಯಲ್ಲಿ 20 ಹಾಸಿಗೆಗಳ ಹೃದಯ ಚಿಕಿತ್ಸಾ ಘಟಕ ಸ್ಥಾಪಿಸಲು ಅನುಮೋದನೆ ನೀಡಿ, 10 ಕೋಟಿ ಅನುದಾನ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡುರಾವ್ ಅವರಿಗೆ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ ಅಹಮದ್ ಖಾನ್ ಅವರಿಗೆ ಶಾಸಕ ಹೆಚ್.ಆರ್.ಗವಿಯಪ್ಪ ಕೃತಜ್ಞತೆ ಸಲ್ಲಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande