ಬಳ್ಳಾರಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ
ಬಳ್ಳಾರಿ, 06 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿನ ಕ್ರೀಡಾಪಟುಗಳಿಗೆ ಸೂಕ್ತ ತರಬೇತಿ, ವಸತಿ ನಿಲಯ ವ್ಯವಸ್ಥೆ ಸೇರಿದಂತೆ ಅವರನ್ನು ಪ್ರೋತ್ಸಾಹಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಡಾ.ಬಾಬು ಜಗಜೀವನರಾಮ್ ಚರ್ಮ ಮತ್ತು ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ
Ballari district level Dasara sports meet kicks off


Ballari district level Dasara sports meet kicks off


ಬಳ್ಳಾರಿ, 06 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿನ ಕ್ರೀಡಾಪಟುಗಳಿಗೆ ಸೂಕ್ತ ತರಬೇತಿ, ವಸತಿ ನಿಲಯ ವ್ಯವಸ್ಥೆ ಸೇರಿದಂತೆ ಅವರನ್ನು ಪ್ರೋತ್ಸಾಹಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಡಾ.ಬಾಬು ಜಗಜೀವನರಾಮ್ ಚರ್ಮ ಮತ್ತು ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಹೇಳಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಬಳ್ಳಾರಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷೆಯಿಂದ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗಳು ಸ್ಥಗಿತಗೊಂಡಿದ್ದವು. ಮೀಸಲಾತಿ ವರ್ಗೀಕರಣದಿಂದ ಪ್ರಸ್ತುತದಿಂದ ಹುದ್ದೆಗಳ ನೇಮಕ ಚಾಲನೆಗೊಂಡಿದ್ದು, ರಾಜ್ಯ ಸರ್ಕಾರವು ವಿವಿಧ ಇಲಾಖೆಗಳ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ವಿಶೇಷವಾದ ಮೀಸಲಾತಿ ಸೌಲಭ್ಯ ಕಲ್ಪಿಸಿದೆ. ಹಾಗಾಗಿ ಕ್ರೀಡಾಪಟುಗಳು ಇದರ ಅವಕಾಶ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಕ್ರೀಡೆಗಳಲ್ಲಿ ಭಾಗವಹಿಸಿದರೆ ದೈಹಿಕ, ಮಾನಸಿಕ ಹಾಗೂ ಬೌದ್ಧಿಕ ಆರೋಗ್ಯ ಬೆಳವಣಿಗೆಯಾಗುತ್ತದೆ. ಕ್ರೀಡೆಗಳು ನಮ್ಮ ಜೀವನವನ್ನು ಸಮೃದ್ಧಗೊಳಿಸುತ್ತವೆ. ಕ್ರೀಡೆಗಳಲ್ಲಿ ಸೋಲು-ಗೆಲುವು ಸಾಮಾನ್ಯ. ಜಿಲ್ಲೆ, ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಆಶಿಸಿದರು.

ಇಂದಿನ ಯುವಕರು ಹೆಚ್ಚಾಗಿ ಮೊಬೈಲ್ ಬಳಸದೆ ಹಾಗೂ ದುಶ್ಚಟಗಳಿಂದ ದೂರವಿದ್ದು, ಕ್ರೀಡಾಸಕ್ತಿ ಬೆಳಿಸಿಕೊಳ್ಳಬೇಕು. ಪ್ರತಿದಿನ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಮಾತನಾಡಿ, ಬೆಳೆ ಸಮೃದ್ಧಿಗೊಂಡರೆ ಉತ್ತಮ ಫಸಲು, ಮನುಷ್ಯ ಆರೋಗ್ಯದಿಂದಿದ್ದರೆ ಸದೃಢರಾಗಲು ಸಾಧ್ಯ. ಹಾಗಾಗಿ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಯುವಪೀಳಿಗೆಯ ಪಾತ್ರ ಬಹಳ ಮುಖ್ಯವಾಗಿದೆ. ಯುವಕರು ಕ್ರೀಡೆಗಳಲ್ಲಿ ಭಾಗವಹಿಸಿ ಸದೃಢರಾಗರಬೇಕು. ವಯಸ್ಸಿನಲ್ಲಿರುವಾಗಲೇ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಹೇಳಿದರು.

ಮನುಷ್ಯ ಸದೃಢನಾಗಬೇಕಾದರೆ ಆಹಾರ ಮುಖ್ಯ. ಯಾರೂ ಹಸಿವಿನಿಂದ ಬಳಲಬಾರದು ಎನ್ನುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆ ಅನ್ನಭಾಗ್ಯ ಮೂಲಕ ಅಕ್ಕಿ ನೀಡುತ್ತಿದೆ. ನಿರುದ್ಯೋಗ ಯುವಕರಿಗೆ ಯುವನಿಧಿ ಮೂಲಕ ಸಹಾಯಧನ ನೀಡುತ್ತಿದೆ ಎಂದು ತಿಳಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಗ್ರೇಸಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ರೀಡಾಪಟುಗಳು ಯಶಸ್ಸು ಹೊಂದಲು ಸೂಕ್ತ ತರಬೇತಿ ಹೊಂದುವ ಮೂಲಕ ನಿರಂತರ ಪ್ರಯತ್ನ ಹಾಗೂ ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ 400 ಮೀ. ಓಟ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ಮತ್ತು ಪ್ರಮಾಣಪತ್ರ ವಿತರಿಸಲಾಯಿತು.

*ವಿಜೇತರ ಪಟ್ಟಿ:*

ಪುರುಷರ ವಿಭಾಗ: ಆನಂದ, ಇಂಡಿ ಬಸವರಾಜ, ದೀಪಕ್.

ಮಹಿಳೆಯರ ವಿಭಾಗ: ರೇಣುಕಮ್ಮ, ರೋಹಿಣಿ, ಜ್ಯೋತಿ.

ಬಳಿಕ ಅಥ್ಲೆಟಿಕ್ಸ್, ವಾಲಿಬಾಲ್, ಕಬಡ್ಡಿ, ಖೋ-ಖೋ, ಫುಟ್ಬಾಲ್ (ಪುರುಷರಿಗೆ ಮಾತ್ರ), ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್, ಬ್ಯಾಡ್ಮಿಂಟನ್, ಬ್ಯಾಸ್ಕೆಟ್ ಬಾಲ್, ಹಾಕಿ, ಹ್ಯಾಂಡ್‍ಬಾಲ್, ಟೇಬಲ್ ಟೇನ್ನಿಸ್, ಕುಸ್ತಿ ಮತ್ತು ಯೋಗಾ. ಟೆನ್ನಿಸ್, ನೆಟ್‍ಬಾಲ್ ಮತ್ತು ಈಜು ಸೇರಿದಂತೆ ವಿವಿಧ ಕ್ರೀಡೆಗಳು ಜರುಗಿದವು.

ಜಿಲ್ಲೆಯ ವಿವಿಧ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ವಿಜೇತರಾದ ಕ್ರೀಟಾಪಟುಗಳಿಗೆ ಬಳ್ಳಾರಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಆನ್ ಲೈನ್ ಮೂಲಕ ನೋಂದಣಿ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲಾ ಕ್ರೀಡಾಂಗಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ವೈದ್ಯಕೀಯ ವ್ಯವಸ್ಥೆ ಕಲ್ಪಿಸಲಾಗಿತ್ತು.

ಈ ವೇಳೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಶಶಿಧರ್ ಕೆಲ್ಲೂರ, ಹಾಕಿ ತರಬೇತುದಾರ ಜಾಕೀರ್, ಕ್ರೀಡಾಪಟು ಶಮೀನಾ.ಜೆ ಇಲಾಖೆಯ ಸಿಬ್ಬಂದಿ ವರ್ಗ ಸೇರಿದಂತೆ ತರಬೇತುದಾರರು, ಬಳ್ಳಾರಿ ಜಿಲ್ಲಾ ವ್ಯಾಪ್ತಿಯ ಕ್ರೀಡಾಪಟುಗಳು, ಸಾರ್ವಜನಿಕರು ಹಾಗೂ ಇತರರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande