ನಾಯಕರನ್ನು ಮೆಚ್ಚಿಸಲು ಬ್ಯಾಲೆಟ್ : ಬೊಮ್ಮಾಯಿ‌
ಬೆಂಗಳೂರು, 06 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಲು ತೀರ್ಮಾನ ಮಾಡಿರುವ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಬ್ಯಾಲೆಟ್ ಪೇಪರ್ ಇದ್ದಾಗ ಸಾಕಷ್ಟು
Bommayi


ಬೆಂಗಳೂರು, 06 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಲು ತೀರ್ಮಾನ ಮಾಡಿರುವ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಬ್ಯಾಲೆಟ್ ಪೇಪರ್ ಇದ್ದಾಗ ಸಾಕಷ್ಟು ಅಕ್ರಮಗಳು ಆಗಿವೆ. ರಾಜ್ಯ ಚುನಾವಣಾ ಆಯುಕ್ತರು ಹಿಂದೆ ಏನಾಗಿತ್ತು ಎನ್ನುವುದನ್ನು ತಿರುಗಿ ನೋಡಬೇಕು. ಸಿದ್ದರಾಮಯ್ಯ ಅವರು ಇವಿಎಂ ಮೂಲಕ ಆಯ್ಕೆಯಾಗಿ ಎರಡು ಬಾರಿ ಮುಖ್ಯಮಂತ್ರಿ ಅಗಿದ್ದಾರೆ‌. ಈಗ ಬೆಂಗಳೂರಿನ ಜನರಿಗೆ ಬ್ಯಾಲೆಟ್ ಪೇಪರ್ ಬೇಕು ಎಂದು ಹೇಳುತ್ತಿದ್ದಾರೆ. ಜನರನ್ನು ಇಪ್ಪತೈದು ವರ್ಷ ಹಿಂದೆ ಕರೆದುಕೊಂಡು ಹೋಗುತ್ತಿದ್ದಾರೆ. ಇದು ಅವರ ನಾಯಕರನ್ನು ಮೆಚ್ಚಿಸಲು ಮಾಡಿರುವ ತೀರ್ಮಾನ ಎಂದು ಬೊಮ್ಮಾಯಿ‌ ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande