ಫೈಲೇರಿಯಾ ರೋಗದ ಪ್ರಸರಣಾ ಮೌಲ್ಯಮಾಪನ ಸಮೀಕ್ಷೆ
ರಾಯಚೂರು, 06 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಆರೋಗ್ಯ ಇಲಾಖೆಯ ವಿಬಿಡಿಸಿ ಕಾರ್ಯಕ್ರಮದ ಫೈಲೇರಿಯಾ ರೋಗದ ಪ್ರಸರಣಾ ಮೌಲ್ಯಮಾಪನಾ ಸಮೀಕ್ಷೆಗೆ ತಾಲೂಕಿನ ಎಲ್ಲ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆಗಳು ಸಹಕಾರಿಸಬೇಕೆಂದು ರಾಯಚೂರು ತಹಶೀಲ್ದಾರ್ ಸುರೇಶ ವರ್ಮ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚ
ಫೈಲೇರಿಯಾ ರೋಗದ ಪ್ರಸರಣಾ ಮೌಲ್ಯಮಾಪನ ಸಮೀಕ್ಷೆ


ರಾಯಚೂರು, 06 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಆರೋಗ್ಯ ಇಲಾಖೆಯ ವಿಬಿಡಿಸಿ ಕಾರ್ಯಕ್ರಮದ ಫೈಲೇರಿಯಾ ರೋಗದ ಪ್ರಸರಣಾ ಮೌಲ್ಯಮಾಪನಾ ಸಮೀಕ್ಷೆಗೆ ತಾಲೂಕಿನ ಎಲ್ಲ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆಗಳು ಸಹಕಾರಿಸಬೇಕೆಂದು ರಾಯಚೂರು ತಹಶೀಲ್ದಾರ್ ಸುರೇಶ ವರ್ಮ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸೆಪ್ಟೆಂಬರ್ 6ರ ಶನಿವಾರ ದಂದು ನಗರದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ವಿಬಿಡಿಸಿ ಕಾರ್ಯಕ್ರಮದ ಫೈಲೇರಿಯಾ ರೋಗದ ಪ್ರಸರಣಾ ಮೌಲ್ಯಮಾಪನಾ ಸಮೀಕ್ಷೆಯ ತಾಲೂಕು ಮಟ್ಟದ ಟಾಸ್ಕಫೆÇೀರ್ಸ ಸಮಿತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲೂಕಿನ ಒಟ್ಟು 37 ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆಗಳು ಹಾಗೂ ಹೆಚ್ಚುವರಿಯಾಗಿ ಆಯ್ಕೆಯಾದ 15 ಶಾಲೆಗಳಲ್ಲಿನ ಒಂದು ಹಾಗೂ ಎರಡನೇ ತರಗತಿಯ ವಿಧ್ಯಾರ್ಥಿಗಳಿಗೆ ಇಎಲ್‍ಎಫ್ ರೋಗದ ಪ್ರಸರಣಾ ಮೌಲ್ಯಮಾಪನಾ ಸಮೀಕ್ಷೆ ಹಮ್ಮಿಕೊಳ್ಳಲಾಗಿದ್ದು, ಎಲ್ಲಾ ಶಾಲಾ ಮುಖ್ಯಗುರುಗಳು ಹಾಗೂ ಶಾಲಾ ವ್ಯವಸ್ಥಾಪಕರು ಇಎಲ್‍ಎಫ್ ರೋಗದ ಪ್ರಸರಣಾ ಮೌಲ್ಯಮಾಪನಾ ಸಮೀಕ್ಷೆ ಕೈಗೊಂಡು ಆರೋಗ್ಯ ಇಲಾಖೆಗೆ ಸಹಕಾರ ನೀಡುವಂತೆ ಸೂಚಿಸಿದರು.

ತಾಲೂಕಿನ ಯಾವುದೇ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆಗಳು ನಿರಾಕರಿಸಿದಲ್ಲಿ ಅಂತಹ ಶಾಲೆಯ ನೋಂದಣಿಯನ್ನು ರದ್ದುಪಡಿಸುವುದಾಗಿ ಸಭೆಯಲ್ಲಿ ಎಚ್ಚರಿಸಿದರು.

ಸೆಪ್ಟಂಬರ್-2025ರ ಮಾಹೆಯಲ್ಲಿ ಪರೀಕ್ಷೆ ಮುಗಿದು ದಸರಾ ರಜೆಗೆ ಮಕ್ಕಳು ತೆರಳುವ ಮುಂಚಿತವಾಗಿಯೆ ಈ ಇಎಲ್‍ಎಫ್ ರೋಗದ ಪ್ರಸರಣಾ ಮೌಲ್ಯಮಾಪನ ಸಮೀಕ್ಷೆಯನ್ನು ಎಫ್‍ಟಿಎಸ್ ಕೀಟ್ಸ್ ಮೂಲಕ ಪರೀಕ್ಷಾ ಕಾರ್ಯಪೂರ್ಣಗೊಳಿಸಲು ಆರೋಗ್ಯ ಇಲಾಖೆಯು ಕ್ರಿಯಾ ಯೋಜನೆಯನ್ನು ತಯಾರಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಕಾರ್ಯಾಲಯದ ಕಚೇರಿ ಅಧೀಕ್ಷಕರು, ತಾಲೂಕು ಆರೋಗ್ಯಾಧಿಕಾರಿಗಳು, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿಗಳು ಮತ್ತು ತಾಲೂಕಾ ವಿಬಿಡಿ ಮೇಲ್ವಿಚಾರಕರು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande