ಚಿತ್ರದುರ್ಗ, 06 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿಗೆ ಜಾರಿ ನಿರ್ದೇಶನಾಲಯ ಮತ್ತೆ ಆಘಾತ ನೀಡಿದೆ. ಆನ್‌ಲೈನ್ ಬೆಟ್ಟಿಂಗ್ ಮತ್ತು ಅಕ್ರಮ ಹಣ ವರ್ಗಾವಣೆಯ ಆರೋಪಗಳ ಹಿನ್ನೆಲೆಯಲ್ಲಿ ಈಗಾಗಲೇ ಇಡಿ ವಶದಲ್ಲಿರುವ ವಿರೇಂದ್ರ ವಿರುದ್ಧ ತನಿಖೆ ಮತ್ತಷ್ಟು ತೀವ್ರಗೊಂಡಿದೆ. ಈ ಸಂಬಂಧ ಚಿತ್ರದುರ್ಗದ ಚಳ್ಳಕೆರೆ ನಗರದ ಹಲವು ಬ್ಯಾಂಕ್‌ಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
10ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಚಳ್ಳಕೆರೆ ನಗರಕ್ಕೆ ಬಂದು, ಬ್ಯಾಂಕ್‌ಗಳು ತೆರೆದುಕೊಳ್ಳುತ್ತಿದ್ದಂತೆ ಅಕೌಂಟ್‌ಗಳ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ನಗರದ ಕೊಟೇಕ್ ಮಹೇಂದ್ರ, ಆ್ಯಕ್ಸಿಸ್, ಪೆಡರಲ್, ಕರ್ನಾಟಕ ಬ್ಯಾಂಕ್ ಸೇರಿದಂತೆ ಹಲವಾರು ಶಾಖೆಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.
ಶಾಸಕ ವೀರೇಂದ್ರ ಪಪ್ಪಿಗೆ ಸೇರಿದ 17 ಬ್ಯಾಂಕ್ ಖಾತೆಗಳ ಕುರಿತಂತೆ ಅಧಿಕಾರಿಗಳು ದಾಖಲೆಗಳನ್ನು ಕಲೆ ಹಾಕುತ್ತಿದ್ದಾರೆ. ಜೊತೆಗೆ ಬ್ಯಾಂಕ್ ಲಾಕರ್‌ಗಳನ್ನೂ ತೆರೆಯುವ ಸಾಧ್ಯತೆ ಇದೆ ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ. ಕಳೆದ 15 ದಿನಗಳಲ್ಲಿ ಇದು ಮೂರನೇ ಬಾರಿ ನಡೆದ ಇಡಿ ದಾಳಿಯಾಗಿದೆ.
ಆಗಸ್ಟ್ 22ರಂದು ಮುಂಜಾನೆ 5 ಗಂಟೆಯಿಂದಲೇ ವಿರೇಂದ್ರ ನಿವಾಸದಲ್ಲಿ ಇಡಿ ದಾಳಿ ನಡೆದಿತ್ತು. ಆ ದಾಳಿಯಲ್ಲಿ ಮಧ್ಯರಾತ್ರಿ ತನಕ ದಾಖಲೆಗಳ ಪರಿಶೀಲನೆ ನಡೆದಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಸಂಪತ್ತು ಹಾಗೂ ನಗದು ಹಾಗೂ ಐಶಾರಾಮಿ ವಾಹನಗಳನ್ನು ವಶಪಡಿಸಿಕೊಳ್ಳಲಾಗಿತ್ತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa