ಜಿಎಸ್ ಟಿ ಕಡಿತ ವಿಚಾರದಲ್ಲಿ ಕಾಂಗ್ರೆಸ್ ದ್ವಿಮುಖ ನೀತಿ : ಬೊಮ್ಮಾಯಿ
ಬೆಂಗಳೂರು, 06 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಜಿಎಸ್ ಟಿ ಕಡಿತ ವಿಚಾರದಲ್ಲಿ ಕಾಂಗ್ರೆಸ್ ದ್ವಿಮುಖ ನೀತಿ ಅನುಸರಿಸುತ್ತಿದ್ದು, ಈಗ ಅವರ ಬಣ್ಣ ಬಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅ
Bommayi


ಬೆಂಗಳೂರು, 06 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಜಿಎಸ್ ಟಿ ಕಡಿತ ವಿಚಾರದಲ್ಲಿ ಕಾಂಗ್ರೆಸ್ ದ್ವಿಮುಖ ನೀತಿ ಅನುಸರಿಸುತ್ತಿದ್ದು, ಈಗ ಅವರ ಬಣ್ಣ ಬಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಎಸ್ ಟಿ ಕಡಿತದ ವಿಚಾರದಲ್ಲಿ ಕಾಂಗ್ರೆಸ್ ಡಬಲ್ ಪಾಲಿಸಿ ಅನುಸರಿಸುತ್ತಿದೆ. ಅವರು ಜನರ ಪರ ತೆರಿಗೆ ಕಡಿಮೆ ಆಗಬೇಕು ಅಂತಾರೆ. ಆದರೆ, ತಮ್ಮ ಪಾಲಿನ ತೆರಿಗೆ ಬಿಟ್ಡು ಕೊಡಲು ಸಿದ್ದರಿಲ್ಲ. ಸಿದ್ದರಾಮಯ್ಯ ಅವರು ರಾಜ್ಯದ ಜನರ ಮೇಲೆ ಒಂದು ಲಕ್ಷ ಕೋಟಿ ರೂ. ಹೆಚ್ಚಿಗೆ ತೆರಿಗೆ ಹಾಕಿದ್ದಾರೆ. ಇದರಿಂದ ರಾಜ್ಯದ ಜನರ ಜೀವನ ಸಂಕಷ್ಟಕ್ಕೆ ಸಿಲುಕಿದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಾಮಾನ್ಯ ಜನರ ಅನುಕೂಲಕ್ಕೆ ಜಿಎಸ್ ಟಿ ಕಡಿತ ಮಾಡಿದೆ ಇದರಿಂದ ಬಳಕೆ ಹೆಚ್ಚಾಗಿ ತೆರಿಗೆ ಸಂಗ್ರಹ ಹೆಚ್ಚಾಗುತ್ತದೆ. ತೆರಿಗೆ ಕಡಿತದ ಲಾಭ ಸಾಮಾನ್ಯ ಜನರಿಗೆ ತಲುಪುತ್ತದೆ. ಇದು ಸಾಮಾನ್ಯ ಜನರಿಗೆ ಗೊತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಬಗ್ಗೆ ಪ್ರತಿ ದಿನ ಕೆಲಸ ಮಾಡುತ್ತಿದ್ದಾರೆ. ಜಿಎಸ್ ಟಿ ಕಡಿತ ದೇಶದ ಆರ್ಥಿಕ ದಿಕ್ಸೂಚಿಯನ್ನು ಬದಲಿಸುತ್ತದೆ ಅಷ್ಟೇ ಅಲ್ಲದೇ ನಾವು ನಿರೀಕ್ಷೆ ಮಾಡಿದ್ದಕ್ಕಿಂತ ಮುಂಚೆಯೇ ಭಾರತ ಜಗತ್ತಿನ ಮೂರನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande