ಕೈಮಗ್ಗ ಮತ್ತು ಜವಳಿ ಇಲಾಖೆ : ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ
ರಾಯಚೂರು, 06 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ 2025-26ನೇ ಸಾಲಿಗೆ ನೇಕಾರ ಸಮ್ಮಾನ್ ಯೋಜನೆಯಡಿ ಕೈಮಗ್ಗ ಘಟಕಗಳ ನೇಕಾರರಿಗೆ ಆರ್ಥಿಕ ನೆರವು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನೇಕಾರ ಸಮ್ಮಾನ್ ಯೋಜನೆಯಡಿ ಕೈಮಗ್ಗ ನೇಕಾರಿಕೆ ಹಾಗೂ ಇತರೆ (
ಕೈಮಗ್ಗ ಮತ್ತು ಜವಳಿ ಇಲಾಖೆ : ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ


ರಾಯಚೂರು, 06 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ 2025-26ನೇ ಸಾಲಿಗೆ ನೇಕಾರ ಸಮ್ಮಾನ್ ಯೋಜನೆಯಡಿ ಕೈಮಗ್ಗ ಘಟಕಗಳ ನೇಕಾರರಿಗೆ ಆರ್ಥಿಕ ನೆರವು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ನೇಕಾರ ಸಮ್ಮಾನ್ ಯೋಜನೆಯಡಿ ಕೈಮಗ್ಗ ನೇಕಾರಿಕೆ ಹಾಗೂ ಇತರೆ (ಆಲೈಡ್) ಕೈಮಗ್ಗ ನೇಕಾರಿಕೆ ವೃತ್ತಿಯನ್ನು ಹೊಂದಿದ ನೇಕಾರರಿಗೆ ವಾರ್ಷಿಕವಾಗಿ 5000 ರೂ.ಗಳ ಆರ್ಥಿಕ ನೇರವನ್ನು ಡಿಬಿಟಿ ಮೂಲಕ ನೀಡಲಾಗುತ್ತಿದ್ದು, ಆಸಕ್ತರು ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಪಡೆದು ಸೇವಾ ಸಿಂಧು ತಂತ್ರಾಂಶದಲ್ಲಿ ಸೆಪ್ಟೆಂಬರ್ 15ರೊಳಗಾಗಿ ಅರ್ಜಿ ಸಲ್ಲಿಸಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ರಾಯಚೂರು-584101 ಮೊಬೈಲ್ ಸಂಖ್ಯೆ: 9964001488ಗೆ ಕಚೇರಿಯ ಸಮಯದಲ್ಲಿ ಸಂಪರ್ಕ ಮಾಡಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande