ಅಮೆರಿಕ ಜೊತೆಗಿನ ಸ್ನೇಹಕ್ಕೆ ಭಾರತ ಬೆಲೆ ನೀಡುತ್ತದೆ : ಜೈಶಂಕರ್
ನವದೆಹಲಿ, 06 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಧ್ಯವರ್ತಿತನ ಪ್ರಯತ್ನಗಳಿಗೆ ಭಾರತವು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕದೊಂದಿಗಿನ ಪಾಲುದಾರಿಕೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುವುದಾಗಿ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ತಿಳಿಸಿದ್ದಾರ
ಅಮೆರಿಕ ಜೊತೆಗಿನ ಸ್ನೇಹಕ್ಕೆ ಭಾರತ ಬೆಲೆ ನೀಡುತ್ತದೆ : ಜೈಶಂಕರ್


ನವದೆಹಲಿ, 06 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಧ್ಯವರ್ತಿತನ ಪ್ರಯತ್ನಗಳಿಗೆ ಭಾರತವು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕದೊಂದಿಗಿನ ಪಾಲುದಾರಿಕೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುವುದಾಗಿ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ತಿಳಿಸಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತವು ಅಮೆರಿಕದೊಂದಿಗಿನ ಸ್ನೇಹಕ್ಕೆ ಅತ್ಯಂತ ಮಹತ್ವ ನೀಡುತ್ತದೆ. ಪ್ರಧಾನಿ ಮೋದಿ ಸ್ವತಃ ಈ ಸಂಬಂಧವನ್ನು ಬಲಪಡಿಸಲು ಬದ್ಧರಾಗಿದ್ದಾರೆ. ನಮ್ಮ ಸಂವಾದ ನಿರಂತರವಾಗಿ ನಡೆಯುತ್ತಿದೆ ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಅಮೆರಿಕವು ಭಾರತದ ಮೇಲೆ ಸುಂಕ ವಿಧಿಸಿರುವ ಹಿನ್ನೆಲೆಯಲ್ಲಿ ಎರಡೂ ದೇಶಗಳ ನಡುವಿನ ಸಂಬಂಧದಲ್ಲಿ ಸ್ವಲ್ಪ ಅಂತರ ಕಂಡುಬಂದಿದ್ದರೂ, ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಟ್ರಂಪ್ ಉತ್ತಮ ವೈಯಕ್ತಿಕ ಸಂಬಂಧ ಹೊಂದಿದ್ದಾರೆ ಎಂದು ಜೈಶಂಕರ್ ಸ್ಪಷ್ಟಪಡಿಸಿದರು.

ಈ ನಡುವೆ ಶ್ವೇತಭವನದಲ್ಲಿ ಭಾರತ-ಅಮೆರಿಕ ಸಂಬಂಧಗಳ ಕುರಿತು ಮಾತನಾಡಿದ ಟ್ರಂಪ್, ಪ್ರಧಾನಿ ಮೋದಿಯವರ ವ್ಯಕ್ತಿತ್ವವನ್ನು ಶ್ಲಾಘಿಸಿದ್ದು, ಭಾರತ ಮತ್ತು ಅಮೆರಿಕ ನಡುವೆ ವಿಶೇಷ ಸಂಬಂಧವಿದೆ, ಚಿಂತಿಸಲು ಏನೂ ಇಲ್ಲ ಎಂದು ಟ್ರಂಪ್ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande