ಆಕ್ಷೇಪಣೆಗೆ ಅರ್ಜಿ ಆಹ್ವಾನ
ಹೊಸಪೇಟೆ, 06 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲಾ ಎನ್‍ಆರ್‍ಎಲ್‍ಎಂ ಯೋಜನೆಯಡಿ ಜಿಲ್ಲಾ ಅಭಿಯಾನ ಘಟಕ ಹಾಗೂ ತಾಲೂಕು ಅಭಿಯಾನ ನಿರ್ವಹಣಾ ಘಟಕಗಳಲ್ಲಿ ಖಾಲಿ ಇರುವ 19 ಹೊರಗುತ್ತಿಗೆ ಸಿಬ್ಬಂದಿ ನೇಮಕಾತಿ ಕುರಿತಂತೆ ತಾತ್ಕಾಲಿಕ ಆಯ್ಕೆ ಪಟ್ಟಿ 1:3 ಗೆ ಆಕ್ಷೇಪಣೆ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗ
ಆಕ್ಷೇಪಣೆಗೆ ಅರ್ಜಿ ಆಹ್ವಾನ


ಹೊಸಪೇಟೆ, 06 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲಾ ಎನ್‍ಆರ್‍ಎಲ್‍ಎಂ ಯೋಜನೆಯಡಿ ಜಿಲ್ಲಾ ಅಭಿಯಾನ ಘಟಕ ಹಾಗೂ ತಾಲೂಕು ಅಭಿಯಾನ ನಿರ್ವಹಣಾ ಘಟಕಗಳಲ್ಲಿ ಖಾಲಿ ಇರುವ 19 ಹೊರಗುತ್ತಿಗೆ ಸಿಬ್ಬಂದಿ ನೇಮಕಾತಿ ಕುರಿತಂತೆ ತಾತ್ಕಾಲಿಕ ಆಯ್ಕೆ ಪಟ್ಟಿ 1:3 ಗೆ ಆಕ್ಷೇಪಣೆ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಕ್ರಮ್ ಅಲಿ ಷ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯತ್ ಕಾರ್ಯಲಯದ ಸೂಚನಾ ಫಲಕದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಕುರಿತಂತೆ ಅಭ್ಯರ್ಥಿಗಳು ಯಾವುದೇ ಆಕ್ಷೇಣೆಗಳಿದ್ದಲ್ಲಿ ಸೆ.09 ರೊಳಗಾಗಿ ಲಿಖಿತವಾಗಿ ಜಿಲ್ಲಾ ಪಂಚಾಯತ್‍ಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಯೋಜನಾ ನಿರ್ದೇಶಕರ ವಿಭಾಗದ ಅಧೀಕ್ಷಕ ಬಿ.ಜಿ.ನಾಗರಾಜ ಮೊ.7975023490 ಅಥವಾ ಇ ಮೇಲ್ pd.zpvijayanagara@gmail.com ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande