ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ : ಮಳಿಗೆ ಕಾಯ್ದಿರಿಸಲು ಆಹ್ವಾನ
ಬಳ್ಳಾರಿ, 06 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಮೈಸೂರು ದಸರಾ ಉತ್ಸವ-2025ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಸೆ.22 ರಿಂದ ಅ.01 ರವರೆಗೆ “ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2025”ನ್ನ
ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ : ಮಳಿಗೆ ಕಾಯ್ದಿರಿಸಲು ಆಹ್ವಾನ


ಬಳ್ಳಾರಿ, 06 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಮೈಸೂರು ದಸರಾ ಉತ್ಸವ-2025ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಸೆ.22 ರಿಂದ ಅ.01 ರವರೆಗೆ “ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2025”ನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನ, ಹಳೆ ಡಿ.ಸಿ. ಕಚೇರಿ ಎದುರು, ಮೈಸೂರು, ಇಲ್ಲಿ ಏರ್ಪಡಿಸಲಾಗಿದ್ದು, ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದಾಗಿದೆ.

ಮಳಿಗೆಯೊಂದಕ್ಕೆ ರೂ.1000 ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಅವರ ಹೆಸರಿನಲ್ಲಿ ಡಿಡಿಗಳನ್ನು ಸಲ್ಲಿಸಿ ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಚೇರಿ ಅಥವಾ ಕನ್ನಡ ಮತ್ತು ಸಂಸ್ಕøತಿ ಸಹಾಯಕ ನಿರ್ದೇಶಕರು ಕಚೇರಿಯಲ್ಲಿ, ಇಲ್ಲವೇ ಪ್ರಾಧಿಕಾರದ ಆನ್‍ಲೈನ್ ವೆಬ್‍ಸೈಟ್‍ನಲ್ಲಿ ಅರ್ಜಿಯನ್ನು ಪಡೆಯಬಹುದು.

ಭರ್ತಿಮಾಡಿ ಅರ್ಜಿಯನ್ನು ಡಿ.ಡಿ.ಯೊಂದಿಗೆ ಸೆ.18 ರಂದು ಸಂಜೆ 05 ಗಂಟೆಯ ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಅವರ ಹೆಸರಿಗೆ ಅಂಚೆಯ ಮೂಲಕ ಅಥವಾ ಇ-ಮೇಲ್ https://kpp.karnataka.gov.in ರ ಮೂಲಕ ಸಲ್ಲಿಸಬಹುದು. ನಿರ್ಮಿಸಲಾಗುವ ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕನ್ನಡ ಪುಸ್ತಕ ಪ್ರಾಧಿಕಾರ ಆಡಳಿತಾಧಿಕಾರಿ ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002, ಅಥವಾ ದೂ.080-22484516 / 22107704 ಗೆ ಸಂಪರ್ಕಿಸಬಹುದು ಎಂದು ಎಂದು ಕನ್ನಡ ಪುಸ್ತಕ ಪ್ರಾಧಿಕಾರ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande