ಶಿಕ್ಷಕ ಸಮೂಹದ ಶ್ರಮ ಶ್ಲಾಘನೀಯ : ಎನ್.ಎಸ್.ಬೋಸರಾಜು
ರಾಯಚೂರು, 06 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ನಾನಾ ದೇಶಗಳೊಂದಿಗೆ ಸ್ಪರ್ಧೆ ಮಾಡಲು ನಮಗೆ ಶಿಕ್ಷಣವು ತುಂಬಾ ಅವಶ್ಯಕವಾಗಿದೆ. ಈ ದಿಶೆಯಲ್ಲಿ ಯೋಚಿಸಿದಾಗ ನಿರಂತರವಾಗಿ ಮಕ್ಕಳ ಕಲಿಕೆಯಲ್ಲಿ ತೊಡಗುವ ಶಿಕ್ಷಕ ಸಮೂಹದ ಶ್ರಮ ಶ್ಲಾಘನೀಯವಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರ
ಶಿಕ್ಷಕ ಸಮೂಹದ ಶ್ರಮ ಶ್ಲಾಘನೀಯ : ಎನ್.ಎಸ್.ಬೋಸರಾಜು


ರಾಯಚೂರು, 06 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ನಾನಾ ದೇಶಗಳೊಂದಿಗೆ ಸ್ಪರ್ಧೆ ಮಾಡಲು ನಮಗೆ ಶಿಕ್ಷಣವು ತುಂಬಾ ಅವಶ್ಯಕವಾಗಿದೆ. ಈ ದಿಶೆಯಲ್ಲಿ ಯೋಚಿಸಿದಾಗ ನಿರಂತರವಾಗಿ ಮಕ್ಕಳ ಕಲಿಕೆಯಲ್ಲಿ ತೊಡಗುವ ಶಿಕ್ಷಕ ಸಮೂಹದ ಶ್ರಮ ಶ್ಲಾಘನೀಯವಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ಕರ್ನಾಟಕ ವಿಧಾನ ಪರಿಷತ್ತು ಸಭಾ ನಾಯಕರಾದ ಎನ್.ಎಸ್.ಬೋಸರಾಜು ಅವರು ಹೇಳಿದರು.

ಸೆಪ್ಟೆಂಬರ್ 6ರ ಶನಿವಾರ ದಂದು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ 2025-26ನೇ ಸಾಲಿನ ರಾಯಚೂರು ಜಿಲ್ಲಾ ಹಾಗೂ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸರ್ವಪಲ್ಲಿ ರಾಧಕೃಷ್ಣನ್ ಅವರು ಈ ನಾಡು ಕಂಡ ಶ್ರೇಷ್ಠ ಶಿಕ್ಷಣ ತಜ್ಞರಾಗಿದ್ದಾರೆ. ಅವರ ಆಚಾರ, ವಿಚಾರ ಮತ್ತು ಅವರ ಸಂದೇಶಗಳನ್ನು ಪಾಲಿಸುವ ಮೂಲಕ ಉತ್ತಮವಾದ ಭವಿಷ್ಯ ರೂಪಿಸಬೇಕಿದೆ. ನಾನಾ ಸವಾಲುಗಳು ಹಾಗೂ ಮೂಲಭೂತ ಸೌಲಭ್ಯಗಳ ಕೊರತೆಯ ನಡುವೆಯೂ ಶಿಕ್ಷಕರು ತಮ್ಮ ಕರ್ತವ್ಯವನ್ನು ನಿಭಾಯಿಸುತ್ತಿರುವುದು ಪ್ರಶಂಶನೀಯ ಕಾರ್ಯವಾಗಿದೆ ಎಂದರು.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಸಾವಿರಾರು ಕೋಟಿ ರೂ.ಗಳನ್ನು ಪ್ರತಿವರ್ಷ

ನೀಡುತ್ತದೆ. ಈ ಅನುದಾನ ಬಳಸಿಕೊಂಡು ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಣ ಮತ್ತು ಆರೋಗ್ಯದ ಅಭಿವೃದ್ಧಿ ಹಾಗೂ ಶಿಕ್ಷಕರ ಕೊರತೆಗಳನ್ನು ನೀಗಿಸಲು, ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿನ ಕೆಲ ಶಾಲೆಗಳಲ್ಲಿ ಕುಡಿಯುವ ನೀರು, ಶೌಚಾಲಯಗಳು ಸೇರಿದಂತೆ ನಾನಾ ಮೂಲಭೂತ ಸೌಕರ್ಯದ ಕೊರತೆ ಇರುವುದರ ಬಗ್ಗೆ ಇತ್ತೀಚೆಗೆ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆಯಾಗಿದೆ. ಈ ಸಮಸ್ಯೆ ಬಗೆಹರಿಸಲು ರಾಜ್ಯದ ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದರು. ಈ ಭಾಗದಲ್ಲಿ ಶಿಕ್ಷಕರ ನೇಮಕಾತಿ, ಮುಂಬಡ್ತಿ, ವೇತನ ಸೇರಿದಂತೆ ಶಿಕ್ಷಕರ ಮತ್ತು ಸಾರ್ವಜನಿಕರ ಬೇಡಿಕೆಗಳಿಗೆ ರಾಜ್ಯ ಸರ್ಕಾರವು ಹಂತ-ಹಂತವಾಗಿ ಸ್ಪಂದಿಸುತ್ತಿದೆ ಎಂದು ತಿಳಿಸಿದರು.

ಈ ವೇಳೆ ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಶಿವರಾಜ ಎಸ್. ಪಾಟೀಲ್ ಅವರು ಮಾತನಾಡಿ, ಶಿಕ್ಷಕರು ಕಣ್ಣಿಗೆ ಕಾಣುವ ದೇವರಿದ್ದಂತೆ ಎಂದು ಅವರ ಕಾರ್ಯಸಾಧನೆಯನ್ನು ಬಣ್ಣಸಿದರು.

ಶಿಕ್ಷಕರು ದಿನ ನಿತ್ಯ ಒಂದಿಲ್ಲೊಂದು ಕಾರ್ಯದೊತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರ ಕಾರ್ಯಭಾರದ ಹೊರೆಯನ್ನು ಕಡಿಮೆ ಮಾಡಬೇಕು. ಅಂದಾಗ ಮಾತ್ರ ಶಿಕ್ಷಕರಿಂದ ಗುಣಮಟ್ಟದ ಕಲಿಕೆಯನ್ನು ನಿರೀಕ್ಷೆ ಮಾಡಬಹುದಾಗಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಗುರುಭವನ ನಿರ್ಮಾಣಕ್ಕಾಗಿ ಈಗಾಗಲೇ ಅನುದಾನ ಮೀಸಲಿರಿಸಲಾಗಿದೆ. ಜಾಗದ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ತಿಳಿಸಿದರು.

ಸಾಹಿತಿ ರಮೇಶಬಾಬು ಯಾಳಗಿ ಅವರು ಉಪನ್ಯಾಸ ನೀಡಿ, ಗುರು ಇಲ್ಲದೆ ಗುರಿ ತಲುಪುವುದು ಬಹಳ ಕಷ್ಟ. ಭರವಸೆಯನ್ನು ಹೆಚ್ಚಿಸುವ, ಕನಸನ್ನು ಸಾಕಾರಗೊಳಿಸುವ, ಕಲಿಕಾ ಶಕ್ತಿಯನ್ನು ಹೆಚ್ಚಿಸುವ ಸೂತ್ರಧಾರನೇ ಉತ್ತಮ ಶಿಕ್ಷಕ. ದೇಶದ ಪ್ರಗತಿಯಲ್ಲಿ ಶಿಕ್ಷಣಕ್ಕೆ ಎಷ್ಟು ಮಹತ್ವವಿದೆಯೋ ಅμÉ್ಟೀ ಮಹತ್ವ ಶಿಕ್ಷಕರಿಗೂ ಇದೆ. ಶಿಕ್ಷಣ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಶಿಕ್ಷಕರು ಸರಿಯಾಗಿ ಅರಿತು ಬೋಧನೆ ಇತರೆ ಕ್ಷೇತ್ರದಲ್ಲಿ ಸಮಗ್ರ ಬದಲಾವಣೆಯ ಕಾರ್ಯರೂಪಕ್ಕೆ ತರುವಲ್ಲಿ ಪ್ರಯತ್ನಿಸಬೇಕು ಎಂದರು.

ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ: ಶಾಲಾ ಶಿಕ್ಷಣ ಇಲಾಖೆಯಿಂದ 2025-26ನೇ ಸಾಲಿನ ರಾಯಚೂರು ಜಿಲ್ಲಾ ಹಾಗೂ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಇದೆ ವೇಳೆ ವಿವಿಧ ಶಾಲೆಗಳ ಶಿಕ್ಷಕರಿಗೆ ಪ್ರದಾನ ಮಾಡಲಾಯಿತು.

ಇದೇ ಸಂದರ್ಭದಲ್ಲಿ ರಾಯಚೂರು ಮಹಾನಗರ ಪಾಲಿಕೆಯ ಅಧ್ಯಕ್ಷರಾದ ನರಸಮ್ಮ ನರಸಿಂಹಲು ಮಾಡಗಿರಿ, ಶಾಲಾ ಶಿಕ್ಷಣ ಇಲಾಖೆಯ ಆಡಳಿತ ವಿಭಾಗದ ಉಪ ನಿರ್ದೇಶಕರಾದ ಕೆ.ಡಿ.ಬಡಿಗೇರ, ರಾಯಚೂರು ಒಕ್ಕುಲುತನ ಹುಟ್ಟುವಳಿ ಮಾರಾಟ ಮತ್ತು ಸಹಕಾರ ಸಂಘದ ಅಧ್ಯಕ್ಷರಾದ ಜಯಂತರಾವ್ ಪತಂಗೆ, ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಚನ್ನಬಸವ, ಮುಖಂಡರಾದ ಶಿವಮೂರ್ತಿ, ರಾಯಚೂರು ಕ್ಷೇತ್ರ ಶಿಕ್ಷಣಾಧಿಕಾರಿ ಈರಣ್ಣ ಕೊಸಗಿ ಸೇರಿದಂತೆ ವಿವಿಧ ಶಾಲೆಗಳ ಮುಖ್ಯಗುರುಗಳು, ಶಿಕ್ಷಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande