ಕೊಪ್ಪಳ, 06 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿನ ಶ್ರೀ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರವನ್ನು ಜಿಲ್ಲಾ ಮಟ್ಟದಲ್ಲಿ ನಾಳೆ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ.
ಅಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಜಯಂತಿ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಹಾಗೂ ತಮ್ಮ ಕಚೇರಿ ಹಾಗೂ ಅಧೀನ ಕಾರ್ಯಾಲಯಗಳಲ್ಲಿ ಜಯಂತಿ ಕಾರ್ಯಕ್ರಮವನ್ನು ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್