ನವದೆಹಲಿ, 06 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾರತ-ಅಮೆರಿಕ ಸಂಬಂಧಗಳ ಬಗ್ಗೆ ತೋರಿದ ಸಕಾರಾತ್ಮಕ ಮನೋಭಾವವನ್ನು ಶ್ಲಾಘಿಸಿದ್ದಾರೆ.
“ಅಧ್ಯಕ್ಷ ಟ್ರಂಪ್ ಅವರ ಅಭಿಪ್ರಾಯ ಶ್ಲಾಘನೀಯ, ಭಾರತ-ಅಮೆರಿಕ ಸಂಬಂಧಗಳು ಸಮಗ್ರ ಮತ್ತು ಜಾಗತಿಕ ಪಾಲುದಾರಿಕೆ” ಎಂದು ಮೋದಿ ಎಕ್ಸ್‌ನಲ್ಲಿ ಹೇಳಿದ್ದಾರೆ.
ಇದಕ್ಕೂ ಮೊದಲು ಟ್ರಂಪ್ “ಮೋದಿ ನನ್ನ ಸ್ನೇಹಿತರು, ಭಾರತ-ಅಮೆರಿಕ ಸಂಬಂಧ ಬಹಳ ವಿಶೇಷ” ಎಂದು ಅಭಿಪ್ರಾಯಪಟ್ಟಿದ್ದರು.
ಆದರೆ, ಮೋದಿ ತೆಗೆದುಕೊಂಡ ಕೆಲವು ಕ್ರಮಗಳು ತಮಗೆ ಇಷ್ಟವಿಲ್ಲವೆಂದೂ ಹೇಳಿದ್ದಾರೆ. ಆದರೂ ಎರಡೂ ರಾಷ್ಟ್ರಗಳ ಸಂಬಂಧದಲ್ಲಿ ಯಾವುದೇ ಬಿರುಕು ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa