ಕೊಪ್ಪಳ, 06 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲೆಯ ಕದಡಿ ಗ್ರಾಮದ ರಜಿಯಾಬಿ ಗಂಡ ಸೂಲೀಮಾನ (21) ಜುಲೈ 30 ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಯಲಬುರ್ಗಾ ತಾಲ್ಲೂಕಿನ ಮುಧೋಳ ಗ್ರಾಮದಲ್ಲಿರುವ ತನ್ನ ತಂದೆಯ ಮನೆಯಿಂದ ಗಂಡನ ಊರಾದ ಕದಡಿ ಗ್ರಾಮಕ್ಕೆ ಹೋಗುವುದಾಗಿ ಹೇಳಿ ಹೋದವರು ಎಲ್ಲಿಗೂ ಹೋಗದೆ ನಾಪತ್ತೆಯಾಗಿರುತ್ತಾರೆ. ಈ ಬಗ್ಗೆ ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ: 134/2025 ಕಲಂ: ಮಹಿಳೆ ಕಾಣೆ ನೇದ್ದರ ಅಡಿಯಲ್ಲಿ ಪ್ರಕರಣದ ದಾಖಲಾಗಿದೆ.
ಕಾಣೆಯಾದ ಮಹಿಳೆಯ ಚಹರೆ:
ಮಹಿಳೆಯು 4.6 ಅಡಿ ಎತ್ತರವಿದ್ದು, ಸದೃಢ ಮೈಕಟ್ಟು, ಸಾದಗೆಂಪು ಮೈಬಣ್ಣ ಹಾಗೂ ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಕಾಣೆಯಾದಾಗ ಹಳದಿ ಬಣ್ಣದ ಸೀರೆ ಹಾಗೂ ಬಿಳಿ ಬಣ್ಣದ ಜಂಪರ್ ಧರಿಸಿದ್ದರು.
ಮೇಲ್ಕಂಡ ಚಹರೆಯ ಮಹಿಳೆಯ ಕುರಿತು ಯಾರಿಗಾದರೂ ಮಾಹಿತಿ ಇದ್ದಲ್ಲಿ ಅಥವಾ ದೊರೆತಲ್ಲಿ ಯಲಬುರ್ಗಾ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 9480803749 ಮತ್ತು 08534-220133 ಅಥವಾ ಕೊಪ್ಪಳ ಕಂಟ್ರೋಲ್ ರೂಮ್ ನಂ.08539-220222 ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಯಲಬುರ್ಗಾ ಪೊಲೀಸ್ ಠಾಣೆ ಪ್ರಕಟಣೆ ಕೋರಿದೆ. ಕಾಣೆಯಾದ ಮಹಿಳೆಯ ಕುರಿತು ಮಾಹಿತಿ ನೀಡಿದವರಿಗೆ ನಗದು ಬಹುಮಾನ ನೀಡಲಾಗುವುದು ಎಂದು ಯಲಬುರ್ಗಾ ಪೊಲೀಸ್ ಠಾಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್