ಬೆಂಗಳೂರು, 07 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ರಾಜ್ಯ ಸರಕಾರ ಬ್ಯಾಲೆಟ್ ಪೇಪರ್ ಜಾರಿಗೆ ತರಲು ಮುಂದಾಗಿರುವುದು ಮೂರ್ಖತನದ ಪರಮಾವಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಈಗ ಬ್ಯಾಲೆಟ್ ಪೇಪರ್ ನೆನಪಾಗಿದೆ. ಇವಿಎಂ ಮೇಲೆ ಅವರಿಗೆ ವಿಶ್ವಾಸವಿಲ್ಲ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಇದಕ್ಕೆ ಕಾರಣ ಹೇಳಬೇಕು. ಮೂರು ಚುನಾವಣೆಗಳಲ್ಲಿ ಕಾಂಗ್ರೆಸ್ ಸೋತಿದೆ, ಜನರು ಅವರನ್ನು ತಿರಸ್ಕರಿಸಿದ್ದಾರೆ. ಇದನ್ನು ಮುಚ್ಚಿಕೊಳ್ಳಲು ಇವಿಎಂ ಸರಿಯಿಲ್ಲ ಎನ್ನುತ್ತಿದ್ದಾರೆ. ಆದರೆ ಇವಿಎಂ ದೋಷಪೂರಿತವಾಗಿದ್ದರೆ ಹಿಮಾಚಲ, ತೆಲಂಗಾಣ, ಕರ್ನಾಟಕಗಳಲ್ಲಿ ಕಾಂಗ್ರೆಸ್ ಹೇಗೆ ಅಧಿಕಾರಕ್ಕೆ ಬಂತು ಎಂದು ಪ್ರಶ್ನಿಸಿದರು.
ಮಹಾರಾಷ್ಟ್ರ, ಹರಿಯಾಣಗಳಲ್ಲಿ ಸೋತಿರುವ ಕಾಂಗ್ರೆಸ್ ಹತಾಶೆಯಿಂದ ಬ್ಯಾಲೆಟ್ ಪೇಪರ್ ಜಾರಿ ವಿಚಾರ ಹೊರತೆಗೆಯುತ್ತಿದೆ. ನಾವು ಬ್ಯಾಲೆಟ್ ಪೇಪರ್‌ಗೆ ಹೆದರುವವರಲ್ಲ, ಅದರ ಅಗತ್ಯವಿಲ್ಲ. ಕಾಂಗ್ರೆಸ್ ಎಲ್ಲವನ್ನೂ ವಿರೋಧಿಸುತ್ತಿದೆ. ಬ್ಯಾಲೆಟ್ ಪೇಪರ್ ವಿರುದ್ಧ ಬಿಜೆಪಿಯಿಂದ ಹೋರಾಟ ನಡೆಯಲಿದೆ ಎಂದು ಎಚ್ಚರಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa