ವಿಜಯಪುರ, 07 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಬೈಕ್‌ಗೆ ಲಾರಿ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟಿ ಪಟ್ಟಣದ ತಾಳಿಕೋಟಿ ಮುದ್ದೇಬಿಹಾಳ ರಸ್ತೆಯಲ್ಲಿ ನಡೆದಿದೆ.
ರಿಯಾಜ್ ಡೋಣೂರ (35) ಮೃತಪಟ್ಟಿದ್ದು, ಹರಮಾನ್ ರಿಯಾಜ್ ಡೋಣೂರ (7) ಗಂಭೀರವಾಗಿ ಗಾಯಗೊಂಡಿದ್ದಾನೆ.
ಗಾಯಾಳುನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಾರಿ ಚಾಲಕ ಭೀರಪ್ಪ ಅಗಸಬಾಳ್ ವಿರುದ್ಧ ಕೇಸ್ ದಾಖಲಾಗಿದೆ.
ಪೊಲೀಸರು, ಲಾರಿ ಸಮೇತ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು
ತಾಳಿಕೋಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande