ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ
ಹುಬ್ಬಳ್ಳಿ, 07 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಹುಬ್ಬಳ್ಳಿ ತಾಲೂಕು ಆಡಳಿತ ಸೌಧದ ತಹಶೀಲ್ದಾರ ಕಾರ್ಯಾಲಯದ ಸಭಾಂಗಣದಲ್ಲಿ ಹುಬ್ಬಳ್ಳಿ ತಾಲೂಕು ಆಡಳಿತದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಅರ್ಪಿಸಿ, ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದಲ್
Jayanti


ಹುಬ್ಬಳ್ಳಿ, 07 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಹುಬ್ಬಳ್ಳಿ ತಾಲೂಕು ಆಡಳಿತ ಸೌಧದ ತಹಶೀಲ್ದಾರ ಕಾರ್ಯಾಲಯದ ಸಭಾಂಗಣದಲ್ಲಿ ಹುಬ್ಬಳ್ಳಿ ತಾಲೂಕು ಆಡಳಿತದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಅರ್ಪಿಸಿ, ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಸಕರಾದ ಮಹೇಶ್ ಟೆಂಗಿನಕಾಯಿ, ಹುಬ್ಬಳ್ಳಿ ನಗರ ತಹಶೀಲ್ದಾರ ಮಹೇಶ ಗಸ್ತಿ, ಗ್ರಾಮೀಣ ತಹಶೀಲ್ದಾರರಾದ ಜೆ.ಬಿ.ಮಜ್ಜಗಿ, ಗ್ರೇಡ್ 2 ತಹಶೀಲ್ದಾರರಾದ ಶಿವಾನಂದ ಹೆಬ್ಬಳ್ಳಿ, ಸಮಾಜದ ಮುಖಂಡರಾದ ಚಂದ್ರಶೇಖರ ಡವಳಗಿ, ತಿಮ್ಮಪ್ಪ ಡಿ ನಾಯಕ, ವಿವೇಕ ಪೂಜಾರಿ ಸೇರಿದಂತೆ ತಾಲೂಕ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande