ಬೆಂಗಳೂರು, 07 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ರಾಜ್ಯದ ಕಾಂಗ್ರೆಸ್ ಸರ್ಕಾರದ ನಡವಳಿಕೆಗಳು ರೈತರನ್ನು ಬಲಿ ಪಡೆಯುತ್ತಿವೆ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ.
ರೈತ ವಿರೋಧಿ ನೀತಿಗಳಿಂದ ನಿತ್ಯವೂ ಸಿದ್ದರಾಮಯ್ಯ ಸರ್ಕಾರ ಜನರ ವಿರೋಧ ಕಟ್ಟಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಕಳೆದ ಎರಡೂವರೆ ವರ್ಷಗಳಲ್ಲೇ 2,422 ರೈತರು ಸಾವಿಗೆ ಶರಣಾಗಿರುವುದು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗೆ ಸಾಕ್ಷಿಯಾಗಿದೆ.
ಅಧಿಕಾರಕ್ಕೆ ಬರುವ ಮುನ್ನ ನಾವು ರೈತರ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಆಶ್ವಾಸನೆ ನೀಡಿದ್ದ ಕಾಂಗ್ರೆಸ್ ನಾಯಕರು ಈಗ ಕೃಷಿಕರ ಹಿತಾಸಕ್ತಿ ಮರೆತು ದ್ರೋಹ ಬಗೆದಿದ್ದಾರೆ.
ಸಿದ್ದರಾಮಯ್ಯನವರೇ ರೈತರ ಬಗೆಗಿನ ನಿರ್ಲಕ್ಷ್ಯ ಬಿಡಿ, ಮೊದಲು ಅನ್ನದಾತರ ಆತ್ಮಹತ್ಯೆ ತಡೆಗೆ ಕ್ರಮ ಕೈಗೊಳ್ಳಿ ಎಂದು ಬಿಜೆಪಿ ಆಗ್ರಹಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa