ಇಂಧನ ಸಚಿವ ಕೆ.ಜೆ. ಜಾರ್ಜ್ ಧಾರವಾಡ ಜಿಲ್ಲಾ ಪ್ರವಾಸ
ಲಿ
Jaorge


ಹುಬ್ಬಳ್ಳಿ, 07 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಇಂಧನ ಸಚಿವ ಕೆ.ಜೆ. ಚಾರ್ಜ್ ಸೆಪ್ಟೆಂಬರ 09 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ 09 ರಂದು ಬೆಳಿಗ್ಗೆ 10 ಗಂಟೆಗೆ ಹುಬ್ಬಳ್ಳಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಗೆ ಭೇಟಿ ನೀಡುವರು. ನಂತರ ಬೆಳಿಗ್ಗೆ 11:30 ಗಂಟೆಗೆ ಹುಬ್ಬಳ್ಳಿ ಗೋಪನಕೊಪ್ಪ ದಲ್ಲಿ ವಿದ್ಯುತ್ ಸರಬರಾಜು ನಿಗಮ ಕಂಪನಿ ಹೊಸದಾಗಿ ನಿರ್ಮಿಸಿರುವ ಕಚೇರಿ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮಧ್ಯಾಹ್ನ 2:30 ಗಂಟೆಗೆ ಹುಬ್ಬಳ್ಳಿ ಗೋಪನಕೊಪ್ಪದ ವಿದ್ಯುತ್ ಸರಬರಾಜು ನಿಗಮ ಕಂಪನಿ ನೂತನ ಕಚೇರಿಯ ಸಭಾಂಗಣದಲ್ಲಿ ಧಾರವಾಡ ಜಿಲ್ಲೆಯ ಎಲ್ಲ ಚುನಾಯಿತ ಜನ ಪ್ರತಿನಿಧಿಗಳೊಂದಿಗೆ ಇಂಧನ ಇಲಾಖೆಗೆ ಸಂಬಂಧಪಟ್ಟ ಪ್ರಗತಿ ಪರಿಶೀಲನಾ ಸಭೆ ಜರುಗಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande