ಚೈಬಾಸಾ, 07 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಗೋಯಿಲ್‌ಕೆರಾ ಪೊಲೀಸ್ ಠಾಣೆ ವ್ಯಾಪ್ತಿಯ ರೆಲಾಪರಾಲ್ ಗ್ರಾಮದ ಬುರ್ಜುವಾ ಬೆಟ್ಟದಲ್ಲಿ ಭದ್ರತಾ ಪಡೆಗಳು ಭಾನುವಾರ ಬೆಳಿಗ್ಗೆ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ನಕ್ಸಲರೊಂದಿಗೆ ಗುಂಡಿನ ಚಕಮಕಿ ನಡೆಯಿತು. ಈ ವೇಳೆ ಸಿಪಿಐ ಮಾವೋವಾದಿ ಸಂಘಟನೆಯ ವಲಯ ಕಮಾಂಡರ್ ಅಮಿತ್ ಹನ್ಸ್‌ದಾ ಅಲಿಯಾಸ್ ಉಪ್ತಾನ್ ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿದ್ದಾನೆ.
ನಕ್ಸಲರ ಚಲನವಲನ ಕುರಿತು ಖಚಿತ ಮಾಹಿತಿ ಮೇರೆಗೆ ಚೈಬಾಸಾ ಪೊಲೀಸರು ಮತ್ತು ಭದ್ರತಾ ಪಡೆಗಳು ಬೆಳಿಗ್ಗೆಯಿಂದಲೇ ಕಾಡು ಪ್ರದೇಶದಲ್ಲಿ ಶೋಧ ಆರಂಭಿಸಿದವು. ನಕ್ಸಲರು ಪಡೆಗಳನ್ನು ನೋಡಿ ಗುಂಡಿನ ದಾಳಿ ನಡೆಸಿದರು. ಇದಕ್ಕೆ ಪಡೆಗಳು ತೀವ್ರ ಪ್ರತಿದಾಳಿ ನಡೆಸಿದವು.
ಹಲವಾರು ಗಂಟೆಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಅಮಿತ್ ಹನ್ಸ್‌ದಾ ಮೃತಪಟ್ಟಿದ್ದು, ಉಳಿದ ನಕ್ಸಲರು ದಟ್ಟವಾದ ಕಾಡಿನಲ್ಲಿ ಪರಾರಿಯಾಗಿದ್ದಾರೆ.
ಘಟನಾ ಸ್ಥಳದಿಂದ ಶಸ್ತ್ರಾಸ್ತ್ರ ಹಾಗೂ ವಿವಿಧ ಸಾಮಗ್ರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆ ಕುರಿತು ಮಾಹಿತಿ ನೀಡಿರುವ ಪೋಲಿಸ್ ವರಿಷ್ಠಾಧಿಕಾರಿ ರಾಕೇಶ್ ರಂಜನ್ ಓರ್ವ ನಕ್ಸಲ್ ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ್ದಾನೆ. ಹೆಚ್ಚುವರಿ ಪಡೆಗಳನ್ನು ಪ್ರದೇಶಕ್ಕೆ ಕಳುಹಿಸಲಾಗಿದೆ. ಶೋಧ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.
ಮೃತ ಅಮಿತ್ ಹನ್ಸ್‌ದಾ ಅಲಿಯಾಸ್ ಉಪ್ತಾನ್ ಸಿಪಿಐ ಮಾವೋವಾದಿ ಸಂಘಟನೆಯ ಪ್ರಮುಖ ವಲಯ ಕಮಾಂಡರ್ ಆಗಿದ್ದು, ಜಾರ್ಖಂಡ್ ಸರ್ಕಾರ ಅವನ ತಲೆಗೆ ₹10 ಲಕ್ಷ ರೂ. ಬಹುಮಾನ ಘೋಷಿಸಿತ್ತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa