ಒಂದು ದೇಶ ಒಂದು ಚುನಾವಣೆ : ಅನುಷ್ಠಾನ ಯೋಗ್ಯ-ಗೌರವ್ ಭಾಟಿಯಾ
ಬೆಂಗಳೂರು, 07 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಮಲ್ಲೇಶ್ವರದ ಹವ್ಯಕ ಭವನದಲ್ಲಿ ಏರ್ಪಡಿಸಿದ್ದ ಒಂದು ದೇಶ ಒಂದು ಚುನಾವಣೆ ಕುರಿತು ವಿದ್ಯಾರ್ಥಿ ಪ್ರಮುಖರ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಮಾತನಾಡಿದರು. ದೇಶದಲ್ಲಿ ಒಂದೇ ಚುನಾವಣೆ ಕುರಿತು ಸಮಗ್ರ ಅಧ್ಯಯನ ನಡೆಸಿ ವ
Gouraw


ಬೆಂಗಳೂರು, 07 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ಮಲ್ಲೇಶ್ವರದ ಹವ್ಯಕ ಭವನದಲ್ಲಿ ಏರ್ಪಡಿಸಿದ್ದ ಒಂದು ದೇಶ ಒಂದು ಚುನಾವಣೆ ಕುರಿತು ವಿದ್ಯಾರ್ಥಿ ಪ್ರಮುಖರ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಮಾತನಾಡಿದರು.

ದೇಶದಲ್ಲಿ ಒಂದೇ ಚುನಾವಣೆ ಕುರಿತು ಸಮಗ್ರ ಅಧ್ಯಯನ ನಡೆಸಿ ವರದಿ ಪಡೆಯಲಾಗಿದೆ. ಆ ವರದಿಯ ಪ್ರಕಾರ, ಈ ಪದ್ಧತಿ ಅನುಷ್ಠಾನಕ್ಕೆ ಸಂಪೂರ್ಣ ಯೋಗ್ಯವಾಗಿದೆ. ಇದೇ ವೇಳೆ, ತಾತ್ಕಾಲಿಕ ನೆಲೆಯಲ್ಲಿ ಹೇರಲಾಗಿದ್ದ 370ನೇ ವಿಧಿಯನ್ನು ಕಾಂಗ್ರೆಸ್ ಮತಬ್ಯಾಂಕ್ ಹಾಗೂ ತುಷ್ಟೀಕರಣದ ಸಲುವಾಗಿ ಕಾಯಂ ಮಾಡಿತ್ತು. ಆದರೆ ಬಿಜೆಪಿ ತನ್ನ ಆಶ್ವಾಸನೆಯಂತೆ 370ನೇ ವಿಧಿಯನ್ನು ರದ್ದುಮಾಡಿ ರಾಷ್ಟ್ರದ ಏಕತೆಯನ್ನು ಬಲಪಡಿಸಿದೆ ಎಂದರು.

ಜಿಎಸ್‌ಟಿ ಸರಳೀಕರಣದ ಮಹತ್ವದ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೈಗೊಂಡಿದ್ದಾರೆ ಎಂದು ಶ್ಲಾಘಿಸಿದರು.

ಕಾಂಗ್ರೆಸ್ ಪಕ್ಷದ ವಿರುದ್ಧ ಟೀಕಾ ಪ್ರಹಾರ ನಡೆಸಿದ ಅವರು, ಮೊದಲು ದೇಶದಲ್ಲಿ ಒಂದು ರಾಷ್ಟ್ರ, ಒಂದೇ ಚುನಾವಣೆ ಪದ್ಧತಿ ಇತ್ತು. ಆದರೆ ಇಂದಿರಾ ಗಾಂಧಿಯವರು ಅನೇಕ ರಾಜ್ಯಗಳ ಚುನಾಯಿತ ಸರ್ಕಾರಗಳನ್ನು ವಿಸರ್ಜಿಸಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಿದರು. ಅದರಿಂದ ಈ ಪದ್ಧತಿಯ ಗಿಟಾರ್‌ನ ತಂತಿಯೇ ಕಡಿದು ಹಾಕಲಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande