ನವದೆಹಲಿ, 07 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ 9 ರಂದು ಪ್ರವಾಹ ಪೀಡಿತ ಪಂಜಾಬ್‌ಗೆ ಭೇಟಿ ನೀಡಲಿದ್ದಾರೆ.
ಅವರು ಗುರುದಾಸ್ಪುರದಲ್ಲಿ ಪ್ರವಾಹದಿಂದ ಹಾನಿಗೊಳಗಾದ ಜನರು ಮತ್ತು ರೈತರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ನೇರವಾಗಿ ಆಲಿಸಲಿದ್ದಾರೆ ಎಂದು ಬಿಜೆಪಿ ಪಂಜಾಬ್ ಘಟಕವು ಸಾಮಾಜಿಕ ಜಾಲತಾಣ ಎಕ್ಸನಲ್ಲಿ ಪ್ರಕಟಿಸಿದೆ.
ಈಗಾಗಲೇ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಅಮೃತಸರ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದರು. ಪ್ರವಾಹದಿಂದಾದ ಹಾನಿ ಅಂದಾಜಿಸಲು ಎರಡು ಕೇಂದ್ರ ತಂಡಗಳು ಪಂಜಾಬ್‌ನಲ್ಲಿ ಪರಿಶೀಲನೆ ನಡೆಸುತ್ತಿದ್ದು, ಶೀಘ್ರದಲ್ಲೇ ತಮ್ಮ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಿವೆ.
ಪಂಜಾಬ್‌ನ ಅನೇಕ ಜಿಲ್ಲೆಗಳು ಕಳೆದ ಕೆಲವು ದಿನಗಳಿಂದ ಪ್ರವಾಹದ ತೀವ್ರ ಬಾಧೆಯನ್ನು ಅನುಭವಿಸುತ್ತಿದ್ದು, ಸಾವಿರಾರು ಕುಟುಂಬಗಳು ಸಂಕಷ್ಟದಲ್ಲಿವೆ. ವ್ಯಾಪಕ ಹಾನಿಯಿಂದಾಗಿ ರಾಜ್ಯ ಸರ್ಕಾರವು ಕೇಂದ್ರದಿಂದ ತುರ್ತು ಆರ್ಥಿಕ ನೆರವಿಗಾಗಿ ಮನವಿ ಮಾಡಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa