ರಾಯಚೂರು, 07 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ರಾಯಚೂರಿನ ಎಚ್ಎಸ್ಆರ್ ಬಡಾವಣೆಯಲ್ಲಿ ಜಿಲ್ಲಾಡಳಿತ, ನಗರಸಭೆ ವತಿಯಿಂದ ನಗರದ ರಂಗಮಂದಿರದಲ್ಲಿ ಆಯೋಜಿಸಿದ್ದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಜಯಂತಿಯಲ್ಲಿ ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ಎಸ್ ಬೋಸರಾಜು ಅವರು ಭಾಗವಹಿಸಿ ಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಮೌಡ್ಯತೆ ಹಾಗೂ ಜಾತಿ ಧರ್ಮದ ತಾರತಮ್ಯ ತೊಲಗಿಸಲು ತಮ್ಮ ಜೀವನವನ್ನೆ ಮುಡಿಪಾಗಿಟ್ಟಿದ್ದರು ಎಂದು ನಾರಾಯಣ ಗುರುಜಿ ಅವರನ್ನು ಸ್ಮರಿಸಿದರು.
ಈ ಸಂದರ್ಭದಲ್ಲಿ ನಗರ ಶಾಸಕರಾದ ಶಿವರಾಜ್ ಪಾಟೀಲ್, ಗ್ರಾಮೀಣ ಶಾಸಕರಾದ ದದ್ದಲ್ ಬಸನಗೌಡ ಮಹಾನಗರ ಪಾಲಿಕೆ ಮಹಾಪೌರರಾದ ನರಸಮ್ಮ ನರಸಿಂಹಲು ಮಾಡಗಿರಿ, ಹಿರಿಯ ಮುಖಂಡರಾದ ಜಯವಂತರಾವ್ ಪತಂಗೆ, ಅಮರೇಗೌಡ ಹಂಚಿನಾಳ, ರುದ್ರಪ್ಪ ಅಂಗಡಿ, ಶಿವಮೂರ್ತಿ ಜಿ, ನರಸನಗೌಡ, ತಾಯನಗೌಡ, ಬಸವರಾಜ ಪಾಟೀಲ್ ಅತ್ತನೂರು ಸೇರಿ ಅನೇಕರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್