ರಾಯಚೂರು : ಸಾಮಾಜಿಕ, ಶೈಕ್ಷಣಿಕ ಸ್ಥಿತಗತಿಯ ಸಮೀಕ್ಷೆ ಅಚ್ಚುಕಟ್ಟಾಗಿ ನಡೆಯಲಿ : ನಿತೀಶ್ ಕೆ.
ರಾಯಚೂರು, 07 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚನೆಯಾದ ಜಿಲ್ಲಾಮಟ್ಟದ ಸಮನ್ವಯ ಸಮಿತಿಯ ಮೊದಲ ಸಭೆಯು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲ
ರಾಯಚೂರು : ಸಾಮಾಜಿಕ, ಶೈಕ್ಷಣಿಕ ಸ್ಥಿತಗತಿಯ ಸಮೀಕ್ಷೆ ಅಚ್ಚುಕಟ್ಟಾಗಿ ನಡೆಯಲಿ: ನಿತೀಶ್ ಕೆ.


ರಾಯಚೂರು : ಸಾಮಾಜಿಕ, ಶೈಕ್ಷಣಿಕ ಸ್ಥಿತಗತಿಯ ಸಮೀಕ್ಷೆ ಅಚ್ಚುಕಟ್ಟಾಗಿ ನಡೆಯಲಿ: ನಿತೀಶ್ ಕೆ.


ರಾಯಚೂರು, 07 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚನೆಯಾದ ಜಿಲ್ಲಾಮಟ್ಟದ ಸಮನ್ವಯ ಸಮಿತಿಯ ಮೊದಲ ಸಭೆಯು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಿತು.

ಈ ವೇಳೆ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಮಾತನಾಡಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗೆಗಿನ ಸಮೀಕ್ಷಾ ಕಾರ್ಯ ಶೀಘ್ರ ಆರಂಭವಾಗಲಿದ್ದು, ಈ ಸಮೀಕ್ಷೆ ಸಂಬ0ಧ ಸರಕಾರವು ಕಾಲಕಾಲಕ್ಕೆ ಹೊರಡಿಸುವ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದರು.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬ0ಧಿಸಿದ0ತೆ ಸರಕಾರದಿಂದ ನೀಡಲಾಗುವ ಸೂಚನೆಗಳು ಹಾಗು ಮಾರ್ಗಸೂಚಿಗಳನ್ನು ಸಂಬAಧಪಟ್ಟ ಅಧಿಕಾರಿ ಹಾಗೂ ಸಿಬ್ಬಂದಿಯು ಸರಿಯಾಗಿ ಗಮನಿಸಿ, ಮಾಸ್ಟರ್ ಟ್ರೇನರಗಳು, ಗಣತಿದಾರರು ಮತ್ತು ಮೇಲ್ವಿಚಾರಕರಿಗೆ ತಿಳಿಸಬೇಕು. ಇದಕ್ಕೆ ಸಂಬ0ಧಿಸಿದ0ತೆ ಏನಾದರು ಗೊಂದಲಗಳಿದ್ದರೆ ಹಿರಿಯ ಅಧಿಕಾರಿಗಳಿಂದ ಕೇಳಿ ತಿಳಿದುಕೊಳ್ಳಬೇಕು. ಯಾವುದೇ ರೀತಿಯ ವ್ಯತ್ಯಾಸವಾಗದಂತೆ ಸಮೀಕ್ಷೆ ಕಾರ್ಯವು ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

2024ನೇ ಸಾಲಿನಲ್ಲಿ ಜಿಲ್ಲಾ ಸಾಂಖ್ಯಿಕ ಇಲಾಖೆಯ ಪ್ರಕಾರ ಅಂದಾಜು 4,75,000 ಕುಟುಂಬಗಳಿರುವುದಾಗಿ ಮಾಹಿತಿ ಇದೆ. ಯಾವುದೇ ಕುಟುಂಬವು ಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರ ವಹಿಸಬೇಕು. ಸಾಮಾನ್ಯವಾಗಿ ಎಲ್ಲಾ ವಾಸದ ಮನೆಗಳಿಗೆ ವಿದ್ಯುತ್ ಸಂಪರ್ಕ ಇರುವುದರಿಂದ ವಿದ್ಯುತ್ ಬಿಲ್ಲಿನ ಆರ್‌ಆರ್ ಸಂಖ್ಯೆ ಆಧಾರದ ಮೇಲೆಯು ಸಹ ಮನೆಗಳನ್ನು ಗುರುತಿಸಿ ಅಲ್ಲಿರುವ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಬೇಕು. ವಿದ್ಯುತ್ ಸಂಪರ್ಕವಿಲ್ಲದ ಮನೆಗಳಿಗು ಸಹ ಗ್ರಾಮ ಆಡಳಿತ ಅಧಿಕಾರಿಗಳ ಮೂಲಕ ಸಂಪರ್ಕ ಮಾಡಬೇಕು ಎಂದು ತಿಳಿಸಿದರು.

ಅಧಿಕಾರಿಗಳು ಪರಸ್ಪರ ಸಮನ್ವಯವಹಿಸಿ ಈ ಸಮೀಕ್ಷೆ ಕೈಗೊಳ್ಳಬೇಕು. ಯಾವುದೇ ಲೋಪದೋಷಗಳು ಆಗಬಾರದು. ತಾಲೂಕು ಮಟ್ಟದಲ್ಲಿ ಸಹ ಸಮೀಕ್ಷಾ ಕಾರ್ಯ ಅಚ್ಚುಕಟ್ಟಾಗಿ ನಡೆಯಬೇಕು. ಗ್ರಾಮಗಳಿಗೆ ಭೇಟಿ ನೀಡಿ ಪ್ರತಿಯೊಂದು ಮನೆಗಳ ಸರ್ವೆ ಮಾಡಬೇಕು. ಈ ಬಗ್ಗೆ ಆಯಾ ತಾಲೂಕುಗಳ ತಹಸೀಲ್ದಾರ್‌ಗಳು ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಮೇಲ್ವಿಚಾರಣೆ ಮಾಡಬೇಕು ಎಂದು ಸೂಚನೆ ನೀಡಿದರು.

ಈ ಸಮೀಕ್ಷೆ ಕಾರ್ಯಕ್ಕೆ ಮಾಸ್ಟರ್ ಟ್ರೇನರ್ ಹಾಗೂ ಮೇಲ್ವಿಚಾರಕರು ಮತ್ತು ಗಣತಿದಾರರ ಅಗತ್ಯತೆ ಇರುತ್ತದೆ. ಈ ಕಾರ್ಯಕ್ಕಾಗಿ 65 ಜನ ಮಾಸ್ಟರ್ ಟ್ರೇನರ್, ಪ್ರತಿ 150 ಮನೆಗಳಿಗೆ ಒಬ್ಬ ಗಣತಿದಾರರು, 20 ಗಣತಿದಾರರಿಗೆ ಒಬ್ಬರು ಮೇಲ್ವಿಚಾರಕರಂತೆ ನೇಮಿಸಿ ಸಮೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸಬೇಕು. ಗಣತಿದಾರರನ್ನಾಗಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಿಸಲು ಮತ್ತು ಮೇಲ್ವಿಚಾರಕರನ್ನಾಗಿ ಸಿಆರ್‌ಪಿಗಳನ್ನು ನೇಮಿಸಲು ಈ ಸಂಬAಧ ಕೂಡಲೇ ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗೆ ಪತ್ರ ಬರೆದು ಕ್ರಮ ವಹಿಸಬೇಕು ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳು ಬಿಸಿಎಂ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವು ಸೆ.22ರಿಂದ ಆರಂಭವಾಗಿ ಅಕ್ಟೋಬರ್ 7ರೊಳಗೆ ಪೂರ್ಣಗೊಳಿಸಲಾಗುತ್ತದೆ. ಸುಮಾರು 65 ಪ್ರಶ್ನಾವಳಿಗಳಿದ್ದು, ಕುಟುಂಬಗಳಿ0ದ ಮಾಹಿತಿ ಪಡೆದು ಆ್ಯಪ್ ಮೂಲಕವೇ ಸಮೀಕ್ಷೆ ಮಾಡಲಾಗುತ್ತದೆ. ಜಿಲ್ಲೆಯಲ್ಲಿನ ಒಟ್ಟು ಕುಟುಂಬಗಳ ಸಂಖ್ಯೆಗೆ ಅನುಗುಣವಾಗಿ ಪ್ರತಿ ಸಮೀಕ್ಷೆದಾರರು ಎಲ್ಲಾ ಮನೆಗಳಿಗೆ ಖುದ್ದು ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುನೀತಾ ಅವರು ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ, ರಾಯಚೂರು ಮಹಾನಗರ ಪಾಲಿಕೆ ಆಯುಕ್ತರಾದ ಜುಬೀನ್ ಮೊಹಪಾತ್ರ, ರಾಯಚೂರು ಸಹಾಯಕ ಆಯುಕ್ತರಾದ ಗಜಾನನ ಬಾಳೆ, ರಾಯಚೂರು ನಗರಾಭಿವೃದ್ಧಿ ಕೋಶದ ಅಧಿಕಾರಿ ತಿಮ್ಮಪ್ಪ ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande