ನವದೆಹಲಿ, 08 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಮಂಡ್ಯ ಜಿಲ್ಲೆಯ ಮದ್ದೂರಿನ ಗಣೇಶ ವಿಸರ್ಜನೆ ಸಂದರ್ಭದಲ್ಲಾದ ಘಟನೆಗಳನ್ನು ಸಣ್ಣಪುಟ್ಟ ಘಟನೆ ಎನ್ನುವ ಗೃಹ ಸಚಿವರ ಹೇಳಿಕೆ ಆಯೋಗ್ಯತನದಿಂದ ಕೂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೋಮು ಗಲಭೆಗೆ ಕಾಂಗ್ರೆಸ್ ಸರ್ಕಾರ ಕುಮ್ಮಕ್ಕು ನೀಡುತ್ತಿದೆ. ಪೊಲೀಸ್ ಇಲಾಖೆಯನ್ನು ಸರ್ಕಾರ ನಿಶ್ಶಕ್ತಗೊಳಿಸಿದೆ. ರಾಜ್ಯ ಸರ್ಕಾರದ ಪಾಪದ ಕೊಡ ತುಂಬಿದೆ. ನಾಳೆ ದೆಹಲಿಯಿಂದ ಮರಳುತ್ತಿದ್ದಂತೆ ಪಕ್ಷದ ಮುಖಂಡರೊಂದಿಗೆ ಮದ್ದೂರಿಗೆ ಭೇಟಿ ನೀಡಿ ಹಿಂದೂ ಕಾರ್ಯಕರ್ತರಿಗೆ ಧೈರ್ಯ ತುಂಬಲಾಗುವುದು ಎಂದು ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa