ರಾಯಚೂರು : ಪ್ರಜಾಪ್ರಭುತ್ವ ದಿನ - ಜಿಲ್ಲಾ ಮಟ್ಟದಲ್ಲಿ ಸ್ಪರ್ಧೆಗಳು
ರಾಯಚೂರು, 08 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್ : ಸೆಪ್ಟೆಂಬರ್ 15 ರಂದು, ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಮತದಾನದ ಮೂಲಕ ಪ್ರಜಾಪ್ರಭುತ್ವದ ಮಹತ್ವ ಕುರಿತು ಜಿಲ್ಲಾ ಮಟ್ಟದಲ್ಲಿ ಚರ್ಚಾ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ಮತ್ತು ಛಾಯಾಗ್ರಹಣ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಜ
ರಾಯಚೂರು : ಪ್ರಜಾಪ್ರಭುತ್ವ ದಿನ - ಜಿಲ್ಲಾ ಮಟ್ಟದಲ್ಲಿ ಸ್ಪರ್ಧೆಗಳು


ರಾಯಚೂರು, 08 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್ : ಸೆಪ್ಟೆಂಬರ್ 15 ರಂದು, ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಮತದಾನದ ಮೂಲಕ ಪ್ರಜಾಪ್ರಭುತ್ವದ ಮಹತ್ವ ಕುರಿತು ಜಿಲ್ಲಾ ಮಟ್ಟದಲ್ಲಿ ಚರ್ಚಾ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ಮತ್ತು ಛಾಯಾಗ್ರಹಣ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.

ಜಿಲ್ಲಾಮಟ್ಟದಲ್ಲಿ ವಿಜೇತರಾದ 3 ಸ್ಪರ್ಧಾರ್ಥಿಗಳಿಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಘನ ಉಪಸ್ಥಿತಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಗುವುದು. ಈ ಸ್ಪರ್ಧೆಯು ಸಾರ್ವಜನಿಕರಿಗೆ ಮುಕ್ತವಾಗಿದ್ದು, ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಕೋರಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಸಿಂದು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande