ರಾಯಚೂರು, 08 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಯುನೈಟೆಡ್ ಕಿಂಗ್‌ಡಮ್‌ನ ಲಂಡನ್ ನಗರದ ಥೇಮ್ಸ್ ನದಿಯ ದಂಡೆಯ ಮೇಲೆ ಸ್ಥಾಪಿಸಲಾಗಿರುವ ಸಾಮಾಜಿಕ ಕ್ರಾಂತಿಯ ಹರಿಕಾರ ಬಸವೇಶ್ವರರ ಪುತ್ಥಳಿಗೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್. ಪಾಟೀಲ್ ಅವರು ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಬಸವ ತತ್ವದ ಮೇಲೆ ಅಪಾರ ನಂಬಿಕೆ ಇಟ್ಟಿರುವ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಿಗೂ ಆಹ್ವಾನ ನೀಡಲಾಗಿದೆ ಎಂದು ತಿಳಿಸಿದರು.
ಕರ್ನಾಟಕದಲ್ಲಿ ಕ್ರಾಂತಿ ಮಾಡಿರುವ ನಮ್ಮ ಬಸವಣ್ಣನವರ ಪ್ರತಿಮೆ ಅನಾವರಣದ ದಶಮಾನೋತ್ಸವ ಸಮಾರಂಭದಲ್ಲಿ ಭಾಗಿಯಾಗಲು ಮಾಡಿರುವ ಮನವಿ ನೀಡುತ್ತೇನೆ ಎಂದು ತಿಳಿಸಿದರು.
ಬಸವೇಶ್ವರರ ವಚನಗಳು ಇಂದಿನ ಕಾಲಘಟ್ಟದಲ್ಲಿಯೂ ಅತಿ ಪ್ರಸ್ತುತವಾಗಿದ್ದು, ನ್ಯಾಯಸಮ್ಮತ ಮತ್ತು ಸಮಾನತೆಯನ್ನು ಒಳಗೊಂಡ ಸಮಾಜವನ್ನು ನಿರ್ಮಿಸಲು ಮಾರ್ಗದರ್ಶಕವಾಗಿವೆ ಎಂದು ಸಚಿವರು ಹೇಳಿದರು.
ಈ ಬಸವೇಶ್ವರರ ಪ್ರತಿಮೆಯನ್ನು 2015ರ ನವೆಂಬರ್ 14ರಂದು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ್ದರು.
ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ. ಸಿ. ಸುಧಾಕರ್, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ ಹಾಗೂ ಸ್ಥಳೀಯ ಕನ್ನಡಿಗರು ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್