ಸೋಮಸಮುದ್ರ : ‘ಗ್ಯಾರಂಟಿ ನಡೆ ಗ್ರಾಮ ಪಂಚಾಯತಿ ಕಡೆ’
ಬಳ್ಳಾರಿ, 08 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ‘ಗ್ಯಾರಂಟಿ ನಡೆ ಗ್ರಾಮ ಪಂಚಾಯತಿ ಕಡೆ’ ಅಡಿಯಲ್ಲಿ ಸೋಮಸಮುದ್ರ ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸೋಮವಾರ ಸಭೆ ನಡೆಯಿತು. ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ಅವರು ಸಭೆಯನ್ನು
ಸೋಮಸಮುದ್ರ: ‘ಗ್ಯಾರಂಟಿ ನಡೆ ಗ್ರಾಮ ಪಂಚಾಯತಿ ಕಡೆ’


ಸೋಮಸಮುದ್ರ: ‘ಗ್ಯಾರಂಟಿ ನಡೆ ಗ್ರಾಮ ಪಂಚಾಯತಿ ಕಡೆ’


ಬಳ್ಳಾರಿ, 08 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ‘ಗ್ಯಾರಂಟಿ ನಡೆ ಗ್ರಾಮ ಪಂಚಾಯತಿ ಕಡೆ’ ಅಡಿಯಲ್ಲಿ ಸೋಮಸಮುದ್ರ ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸೋಮವಾರ ಸಭೆ ನಡೆಯಿತು.

ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ಅವರು ಸಭೆಯನ್ನು ಉದ್ಘಾಟಿಸಿ, ಬಳ್ಳಾರಿ ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ-ಶೇ.98., ಅನ್ನಭಾಗ್ಯ-ಶೇ.99., ಮತ್ತು ಶಕ್ತಿ, ಯುವನಿಧಿ, ಗೃಹಜ್ಯೊತಿ ಯೋಜನೆಗಳು ಶೇಕಡಾ ನೂರಕ್ಕೆ ನೂರರಷ್ಟು ಪ್ರಗತಿ ಸಾಧಿಸಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಕುರುಗೋಡು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಜಿ. ಬಸವನಗೌಡ ಅವರು, ಕುರುಗೋಡು ತಾಲ್ಲೂಕಿನಲ್ಲಿ ಶಕ್ತಿ ಯೋಜನೆಯಡಿ 219 ಕೋಟಿ ರೂ., ಅನ್ನಭಾಗ್ಯ ಯೋಜನೆಯಡಿ 26.07 ಕೋಟಿ ರೂ., ಗೃಹಲಕ್ಷ್ಮಿ ಯೋಜನೆಯಡಿ 294 ಕೋಟಿ ರೂ., ಗೃಹಜ್ಯೋತಿ ಯೋಜನೆಯಡಿ 340 ಕೋಟಿ ರೂ. ಮತ್ತು ಯುವನಿಧಿ ಯೋಜನೆಯಡಿ 95.35 ಲಕ್ಷ ರೂ. ಅನುದಾನ ಪಾವತಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪಂಚ ಗ್ಯಾರಂಟಿ ಯೋಜನೆ ಫಲಾನುಭವಿಗಳ ಕುಂದು-ಕೊರತೆ ಸಂವಾದ ನಡೆಸಲಾಯಿತು.

ಕುರುಗೋಡು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಾರ್ಯದರ್ಶಿ ಹಾಗೂ ಕುರುಗೋಡು ತಾಪಂ ಇಒ ಕೆ.ವಿ.ನಿರ್ಮಲ, ಸೋಮಸಮುದ್ರ ಗ್ರಾಪಂ ಅಧ್ಯಕ್ಷರಾದ ರಾಜೇಶ್ವರಿ, ಉಪಾಧ್ಯಕ್ಷರಾದ ಲಕ್ಷ್ಮಿ, ಸದಸ್ಯರಾದ ಮಂಜುನಾಥ, ಬಸವರಾಜ ಗೊರವರ, ಶಕುಂತಲ ಹಾಗೂ ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande