ಶಿಕ್ಷಣದಿಂದ ಮಾನವೀಯ ಮೌಲ್ಯಗಳನ್ನು ಬೆಳಿಸಿಕೊಳ್ಳಿ
ಬಳ್ಳಾರಿ, 08 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಶಿಕ್ಷಣದಿಂದ ಮಾತ್ರ ಉತ್ತಮವಾದ ಉದ್ಯೋಗ, ಭವಿಷ್ಯ, ಸಂಸ್ಕಾರ ಮತ್ತು ಮೌಲ್ಯಗಳನ್ನು ಬೆಳಿಸಿಕೊಳ್ಳಲು ಸಾಧ್ಯ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪೂರೆ ಅವರು ಅಭಿಪ್ರಾಯಪಟ್ಟಿದ್ದಾರೆ. ತಾಲ್ಲೂಕು ಪಂಚಾಯತ್ ಕಾರ್ಯಾಲಯದಲ್ಲಿ ಸೋಮವಾ
ಶಿಕ್ಷಣದಿಂದ ಮಾನವೀಯ ಮೌಲ್ಯಗಳನ್ನು ಬೆಳಿಸಿಕೊಳ್ಳಿ


ಶಿಕ್ಷಣದಿಂದ ಮಾನವೀಯ ಮೌಲ್ಯಗಳನ್ನು ಬೆಳಿಸಿಕೊಳ್ಳಿ


ಬಳ್ಳಾರಿ, 08 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಶಿಕ್ಷಣದಿಂದ ಮಾತ್ರ ಉತ್ತಮವಾದ ಉದ್ಯೋಗ, ಭವಿಷ್ಯ, ಸಂಸ್ಕಾರ ಮತ್ತು ಮೌಲ್ಯಗಳನ್ನು ಬೆಳಿಸಿಕೊಳ್ಳಲು ಸಾಧ್ಯ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪೂರೆ ಅವರು ಅಭಿಪ್ರಾಯಪಟ್ಟಿದ್ದಾರೆ.

ತಾಲ್ಲೂಕು ಪಂಚಾಯತ್ ಕಾರ್ಯಾಲಯದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ದರ್ಶಿನಿ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಪಂ ಮೇಲ್ವಿಚಾರಕರು ಹಾಗೂ ತಾಲ್ಲೂಕು ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರು ವಿವಿಧ ಪುಸ್ತಕಗಳ ಜ್ಞಾನವನ್ನು ವಿಕಲಚೇತನ ಹಾಗೂ ವಿಶೇಷಚೇತನರಿಗೆ ದರ್ಶಿನಿ ಅರಿವು ಗ್ರಂಥಾಲಯ ಕೇಂದ್ರಗಳ ಮೂಲಕ ವಿಷಯ ಜ್ಞಾನ ನೀಡಿದರೆ ವಿಶೇಷಚೇತನರು ಉತ್ತಮ ಭವಿಷ್ಯ ರೂಪಿಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಲು ಸಾಧ್ಯವಾಗಲಿದೆ ಎಂದು ಹೇಳಿದರು.

ಕಾರ್ಯಾಗಾರದಲ್ಲಿ ಅಂಗವಿಕಲತೆಯುಳ್ಳ ಮಕ್ಕಳು ಎದುರಿಸುತ್ತಿರುವ ಅಡೆ-ತಡೆಗಳು, ವಿವಿಧ ಬಗೆಯ ಅಂಗವಿಕಲತೆ, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ-2016, ದರ್ಶಿನಿ ಅರಿವು ಗ್ರಂಥಾಲಯ ಕೇಂದ್ರಗಳ ಪರಿಚಯ, ಅರಿವು ಕೇಂದ್ರಗಳಲ್ಲಿ ಸುಗಮ ಹಾಗೂ ಅಡೆ-ತಡೆ ಮತ್ತು ಸಂಪನ್ಮೂಲದ ಮೂಲಗಳು, ಅಂಧತ್ವವುಳ್ಳ ಮಕ್ಕಳಿಗಾಗಿ ಪೂರೈಸಿರುವ ಸಹಾಯಕ ಸಾಧನಗಳ ಪರಿಚಯ ಹಾಗೂ ಇನ್ನಿತರೆ ವಿಷಯಗಳ ಬಗ್ಗೆ ತರಬೇತಿ ನೀಡಲಾಯಿತು.

ಜಿಲ್ಲಾ ಪಂಚಾಯತ್ ಸಂಪನ್ಮೂಲ ಕೇಂದ್ರದ ಆಡಳಿತ ಸಹಾಯಕ ಅನಿಲ್ ಕುಮಾರ್, ತರಬೇತಿ ಕಾರ್ಯಾಗಾರದ ಸಂಪನ್ಮೂಲ ಶಿಕ್ಷಕ ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋವಿಂದಪ್ಪ ಹೆಚ್.ಎಂ, ವಿಜಯನಗರ ಜಿಲ್ಲೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರಾಮಾಂಜಿನಿ, ರೂಪನಗುಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಾನಂದ್ ಸೇರಿದಂತೆ ತಾಲ್ಲೂಕು ಸಂಪನ್ಮೂಲ ಕೇಂದ್ರದ ಸಹಾಯಕರು, ಜಿಲ್ಲೆಯ ಆಯ್ದಾ ಗ್ರಾಮ ಪಂಚಾಯಿತಿಯ ಅರಿವು ಕೇಂದ್ರಗಳ ಮೇಲ್ವಿಚಾರಕರು, ಎಲ್ಲಾ ತಾಲ್ಲೂಕಿನ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರು ಹಾಗೂ ಇಲಾಖೆಯ ಸಿಬ್ಬಂದಿ, ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande