ಮದ್ದೂರಿನಲ್ಲಿ ಹಿಂದೂ ಸಂಘಟನೆಗಳ ಬೃಹತ್ ಪ್ರತಿಭಟನೆ : ಲಾಠಿ ಪ್ರಹಾರ
ಮಂಡ್ಯ, 08 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಭಾನುವಾರ ರಾತ್ರಿ ಕಲ್ಲು ತೂರಾಟ ನಡೆದಿದೆ. ಘಟನೆ ಖಂಡಿಸಿ ಹಿಂದು ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇಂದು ಮದ್ದೂರು ಪಟ್ಟಣದಲ್ಲಿ ಹಿಂದುಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದವ
Laticharge


ಮಂಡ್ಯ, 08 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಭಾನುವಾರ ರಾತ್ರಿ ಕಲ್ಲು ತೂರಾಟ ನಡೆದಿದೆ. ಘಟನೆ ಖಂಡಿಸಿ ಹಿಂದು ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಇಂದು ಮದ್ದೂರು ಪಟ್ಟಣದಲ್ಲಿ ಹಿಂದುಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದವು. ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಹಾಕಿ, ಶಾಂತಿಭಂಗಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಈ ವೇಳೆ ಪರಿಸ್ಥಿತಿ ಕೈ ಮೀರಿದ ಹಿನ್ನೆಲೆಯಲ್ಲಿ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ಪ್ರಹಾರ ನಡೆಸಿ ಜನರನ್ನು ಚದುರಿಸಿದ್ದಾರೆ.

ಈ ಸಂದರ್ಭದಲ್ಲಿ ಹಲವರು ಗಾಯಗೊಂಡಿದ್ದು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮದ್ದೂರು ಪಟ್ಟಣದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಉಂಟಾಗಿದ್ದು ಹೆಚ್ಚುವರಿ ಪೋಲಿಸ್ ಬಂದೋಬಸ್ತ ಮಾಡಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande