ವಿಜಯಪುರ, 08 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ರೈತರ ನಾನಾ ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಉತ್ತರ ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ನಡೆಯಿತು.
ಒಂದು ಟನ್ ಕಬ್ಬಿಗೆ ನಾಲ್ಕು ಸಾವಿರ ದರ ನಿಗದಿ ಮಾಡಬೇಕು. ಕಳೆದ ಆಗಷ್ಟ್‌ನಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರ ಬೆಳೆಗಳು ನಾಶವಾಗಿವೆ. ಅದಕ್ಕಾಗಿ ಬೆಳೆಹಾನಿ ಪರಿಹಾರ ಸರ್ಕಾರಗಳು ಒದಗಿಸಬೇಕು. 2024-25ರಲ್ಲಿ ದ್ರಾಕ್ಷಿ ಬೆಳೆ ವಿಮೆ ಭರ್ತಿ ಮಾಡಲಾಗಿದೆ. ಇಲ್ಲಿಯ ವರೆಗೂ ಸರ್ಕಾರ ಆಗಲಿ, ಕಂಪನಿ ಆಗಲಿ ಪರಿಹಾರ ನೀಡಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅದಕ್ಕಾಗಿ ರೈತರ ನಾನಾ ಬೇಡಿಕೆಯನ್ನು ತಕ್ಷಣವೇ ಈಡೇರಿಸಬೇಕು ಎಂದು ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande