ವಿಜಯಪುರ, 08 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ವಿದ್ಯಾರ್ಥಿಗಳು ಕಾನೂನು ಶಿಕ್ಷಣವನ್ನು ಶ್ರದ್ದೆಯಿಂದ ಅಧ್ಯಯನ ಮಾಡಿ ಸಮರ್ಪಣೆ ಮನೋಭಾವದಿಂದ ಸೇವೆ ಮಾಡುವ ಮೂಲಕ ನ್ಯಾಯ ಮತ್ತು ಸಮಗ್ರತೆಯನ್ನು ಎತ್ತಿ ಹಿಡಿಯಬೇಕು ಎಂದು ಬೆಂಗಳೂರಿನ ಕರ್ನಾಟಕ ಸಂಸದೀಯ ಸುಧಾರಣೆ ಸಂಸ್ಥೆ(ಕೆ.ಐ.ಎಲ್.ಪಿ.ಏ.ಆರ್) ನಿರ್ದೇಶಕ ಪ್ರೊ. ಸಿ. ಎಸ್. ಪಾಟೀಲ ಹೇಳಿದ್ದಾರೆ.
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಶಾಲೆಯಲ್ಲಿ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಮಾತನಾಡಿ, ಕಾನೂನು ವಿದ್ಯಾರ್ಥಿಗಳು ಭವಿಷ್ಯದ ನ್ಯಾಯದ ರಕ್ಷಕರು. ಸಂಸ್ಥೆಯು ಒದಗಿಸುವ ಅವಕಾಶಗಳನ್ನು ಉತ್ತಮವಾಗಿ ಬಳಸಿಕೊಳ್ಳಬೇಕು. ಕಾನೂನು ಎಂಬ ಉದಾತ್ತ ವೃತ್ತಿಯನ್ನು ಆಯ್ಕೆ ಕೊಂಡಿರುವುದು ಶ್ಲಾಘನೀಯ ಎಂದು ಹೇಳಿದರು.
ಬಿ.ಎಲ್.ಡಿ.ಇ ಸಂಸ್ಥೆಯ ಕಾನೂನು ಸಲಹೆಗಾರ ಸುರೇಶ ಹಕ್ಕಿ ಮಾತನಾಡಿ, ಕಾನೂನು ಕ್ಷೇತ್ರದಲ್ಲಿ ಶಿಸ್ತು, ನೀತಿಶಾಸ್ತ್ರ ಮತ್ತು ವೃತ್ತಿಪರ ಜವಾಬ್ದಾರಿಯ ಮಹತ್ವವನ್ನು ತಿಳಿಸಿಕೊಟ್ಟರು.
ಬಿ.ಎಲ್.ಡಿ.ಇ ಸಂಸ್ಥೆಯ ಜಮಖಂಡಿ ಆವರಣದ ಆಡಳಿತಾಧಿಕಾರಿ ಪ್ರೊ. ಎಸ್. ಎಚ್. ಲಗಳಿ ಮಾತನಾಡಿ ವಿದ್ಯಾರ್ಥಿಗಳು ಶಾಲೆಯಲ್ಲಿರುವ ಸಕಲ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಕಾನೂನನ್ನು ಸಮಗ್ರವಾಗಿ ಅಧ್ಯಯನ ಮಾಡಿ ವೃತ್ತಿಕೌಶಲ್ಯವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಡೀಮ್ಡ್ ವಿವಿ ಹಂಗಾಮಿ ಕುಲಪತಿ ಡಾ. ಅರುಣ ಚಂ. ಇನಾಮದಾರ, ರಜಿಸ್ಟಾçರ್ ಡಾ. ಆರ್. ವಿ. ಕುಲಕರ್ಣಿ ಮುಂತಾದವರು ಉಪಸ್ಥಿತರಿದ್ದರು.
ಕಾನೂನು ಶಾಲೆಯ ನಿಕಾಯ ಮುಖ್ಯಸ್ಥ ಮತ್ತು ಪ್ರಾಚಾರ್ಯ ಪ್ರೊ. ರಘುವೀರ ಜಿ. ಕುಲಕರ್ಣಿ ಸ್ವಾಗತಿಸಿದರು. ಉಪನ್ಯಾಸಕಿ ಲಾವಣ್ಯ ಪರಿಚಯಿಸಿದರು. ವಿದ್ಯಾರ್ಥಿನಿಯರಾದ ಪ್ರಗತಿ ಮತ್ತು ಶ್ರೇಯ ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕ ಶೇಷಾದ್ರಿ ಕೆ. ವಂದಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande