ಮಂಡ್ಯ, 08 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ಮೆರವಣಿಗೆಯ ವೇಳೆ ಕಲ್ಲು ತೂರಾಟ ನಡೆದ ಹಿನ್ನೆಲೆಯಲ್ಲಿ ಮದ್ದೂರು ಪಟ್ಟಣದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ನಾಳೆ ಬೆಳಗ್ಗೆವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಮಂಡ್ಯ ಪೋಲಿಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಆಗಮಿಸಿ ಪರಿಶೀಲನೆ ನಡೆಸಿ, ಬಳಿಕ ಮಾಧ್ಯಮಗಳಿಗೆ ಮಾತನಾಡಿದರು.
ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ, ಮಂಗಳವಾರ ಬೆಳಗ್ಗೆಯವರೆಗೆ ಮದ್ದೂರಿನಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಹೇಳಿದ್ದಾರೆ.
ಘಟನೆ ಸಂಬಂಧ ಸ್ವಯಂಪ್ರೇರಿತ ಹಾಗೂ ಅಜಯ್ ಎಂಬ ಗಾಯಾಳು ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ. ಈಗಾಗಲೇ 21 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಕಲ್ಲುತೂರಾಟದ ವೇಳೆ ಇಬ್ಬರು ಪೊಲೀಸ್ ಸಿಬ್ಬಂದಿಗೂ ಗಾಯವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿರುವುದರಿಂದ ಪರಿಸ್ಥಿತಿ ಸಂಪೂರ್ಣವಾಗಿ ಹತೋಟಿಯಲ್ಲಿದೆ ಎಂದು ತಿಳಿಸಿದ್ದಾರೆ
ಹಿಂದೂಸ್ತಾನ್ ಸಮಾಚಾರ್ / Rakesh Mahadevappa