ಬೆಂಗಳೂರು, 09 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ನ್ಯಾಯಾಲಯದ ಮುಂದೆ ಅಳಲು ತೋಡಿಕೊಂಡಿದ್ದಾರೆ.
ಬೆಂಗಳೂರು 64ನೇ ಸಿವಿಲ್ ಸೆಷನ್ಸ್ ನ್ಯಾಯಾಲಯದಲ್ಲಿ ಇಂದು ನಡೆದ ವಿಚಾರಣೆ ವೇಳೆ, ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದ ದರ್ಶನ್ ದಯವಿಟ್ಟು ನನಗೆ ವಿಷ ಕೊಡಿ. ಬಿಸಿಲು ನೋಡದೇ ಬಹಳ ದಿನವಾಗಿದೆ. ಬಟ್ಟೆಗಳು ದುರ್ವಾಸನೆ ಬರುತ್ತಿವೆ. ಫಂಗಸ್‌ನಿಂದ ಬದುಕಲು ಕಷ್ಟವಾಗುತ್ತಿದೆ ಎಂದು ಮನವಿ ಮಾಡಿದ್ದಾರೆ.
ದರ್ಶನ ಮನವಿಗೆ ನ್ಯಾಯಾಧೀಶರು ಈ ರೀತಿಯಲ್ಲಿ ಆದೇಶ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾಗಿ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಸೇರಿ ಇನ್ನಿತರ ಆರೋಪಿಗಳನ್ನು ರಾಜ್ಯದ ಇತರೆ ಕಾರಾಗೃಹಗಳಿಗೆ ವರ್ಗಾವಣೆ ಮಾಡುವಂತೆ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿ ಹಾಗೂ ಹೆಚ್ಚುವರಿ ಹಾಸಿಗೆ ಹಾಗೂ ದಿಂಬು ನೀಡುವಂತೆ ದರ್ಶನ್ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿ ವಿಚಾರಣೆ ಇಂದು ನಗರದ 64ನೇ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯಿತು.
ಪ್ರಾಸಿಕ್ಯೂಷನ್ ಮತ್ತು ಹೆಚ್ಚುವರಿ ಹಾಸಿಗೆ ಹಾಗೂ ದಿಂಬು ನೀಡುವಂತೆ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಾಲಯ ಇಂದು ಮಧ್ಯಾಹ್ನ 3 ಗಂಟೆಗೆ ತೀರ್ಪು ಪ್ರಕಟಿಸುವುದಾಗಿ ಹೇಳಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa