ಬಳ್ಳಾರಿ, 09 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಅಶ್ವಿನಿ ಸಿ.ಕೆ ಅವರಿಗೆ ಪಿಹೆಚ್.ಡಿ ಪದವಿ ಲಭಿಸಿದೆ.
ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ.ಕೆ.ಎಸ್. ಲೋಕೇಶ್ ಅವರ ಮಾರ್ಗದರ್ಶನದಲ್ಲಿ `ನಾವೆಲ್ ಎನ್ 4- ಮ್ಯಾಕ್ರೋಸೈಕಲ್ಸ್ ಯಾಸ್ ಎಫಿಸಿಯಂಟ್ ಕ್ಯಾಟಲಿಸ್ಟ್ಸ್ ಫಾರ್ ಎಲೆಕ್ಟ್ರೋಕೆಮಿಕಲ್ಸ್ ಅಪ್ಲಿಕೇಷನ್ಸ್’ ವಿಷಯದ ಮಹಾಪ್ರಬಂಧ ಮಂಡಿಸಿದ್ದಕ್ಕೆ ಪಿಹೆಚ್.ಡಿ ಪದವಿ ಪ್ರದಾನ ಮಾಡಿದೆ ಎಂದು ವಿಶ್ವವಿದ್ಯಾಲಯ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್