ನವದೆಹಲಿ, 09 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿ ಪಕ್ಷಗಳ ಒಕ್ಕೂಟದ ಜಂಟಿ ಅಭ್ಯರ್ಥಿ, ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ಬಿ. ಸುದರ್ಶನ್ ರೆಡ್ಡಿ ಗೆಲುವು ಸಾಧಿಸುವ ಸಾಧ್ಯತೆ ಹೆಚ್ಚಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯ ಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಸಂಸತ್ ಭವನದಲ್ಲಿ ಮತ ಚಲಾಯಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಖರ್ಗೆ, “ಪ್ರತಿ ಪಕ್ಷಗಳು ಒಗ್ಗೂಡಿ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತವೆ. ಎಲ್ಲ ಪಕ್ಷಗಳ ಒಗ್ಗಟ್ಟಿನಿಂದಲೇ ನಮ್ಮ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಮತ್ತು ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ವಿರುದ್ಧ ಪ್ರತಿ ಪಕ್ಷದ ಮೈತ್ರಿಕೂಟದ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿ ಸ್ಪರ್ಧಿಸುತ್ತಿದ್ದಾರೆ. ಹೊಸ ಸಂಸತ್ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಮತದಾನ ಪ್ರಾರಂಭವಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa