
ಗದಗ, 01 ಜನವರಿ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲೆಯ ಮುಂಡರಗಿ ಪುರಸಭೆ ವ್ಯಾಪ್ತಿಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಾರ್ವಜನಿಕರಲ್ಲಿ ಪ್ರಕಟಪಡಿಸುವುದೇನೆಂದರೆ, ಎಸ್.ಎಫ್.ಸಿ, ನಿಧಿ 2025-26 ನೇ ಸಾಲಿನ ಸ್ವಚ್ಛಭಾರತ್ ಮಿಷನ್ 2.0 ಯೋಜನೆಯಡಿಯಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕಾಗಿ ಪುರಸಭೆಗೆ ಒಟ್ಟು 22 ವೈಯಕ್ತಿಕ ಶೌಚಾಲಯ ಗುರಿಯನ್ನು ನಿಗದಿಪಡಿಸಿದೆ.
ವೈಯಕ್ತಿಕ ಶೌಚಾಲಯಗಳನ್ನು ನಿರ್ಮಾಣ ಮಾಡಿಕೊಳ್ಳಲು ಪರಿಶಿಷ್ಟ ಜಾತಿ ಫಲಾನುಭವಿಗಳಿಗೆ -17, ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ-5 ಶೌಚಾಲಯಗಳನ್ನು ಮಾತ್ರ ನಿಗದಿಪಡಿಸಲಾಗಿದೆ. ಪ್ರತಿ ಒಟ್ಟು ಫಲಾನುಭವಿಗಳಿಗೆ 23333/- ರೂ.ಗಳು ಮಾತ್ರ ನಿಯಮಾನುಸಾರವಾಗಿ ಭರಿಸಲು ಅವಕಾಶ ಇರುತ್ತದೆ.
ಮುಂಡರಗಿ ಪುರಸಭೆ ವ್ಯಾಪ್ತಿಯಲ್ಲಿ ವೈಯಕ್ತಿಕ ಶೌಚಾಲಯಗಳನ್ನು ಹೊಂದದೇ ಇರುವ ಹಾಗೂ ಈ ಹಿಂದೆ ವೈಯಕ್ತಿಕ ಶೌಚಾಲಯಕ್ಕೆ ಪುರಸಭೆಯಿಂದ ಯಾವುದೇ ಅನುದಾನ ಪಡೆಯದೇ ಇರುವ ಫಲಾನುಭವಿಗಳು ತಮ್ಮ ಸ್ವಂತ ಜಾಗದಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಗಳನ್ನು ಜನೆವರಿ 17 ರೊಳಗಾಗಿ ಕಚೇರಿಯ ವೇಳೆಯಲ್ಲಿ ಮುಂಡರಗಿ ಪುರಸಭೆ ಕಾರ್ಯಾಲಯಕ್ಕೆ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ ಸಲ್ಲಿಸಬಹುದಾಗಿದೆ. ಮುಂಡರಗಿ ಪಟ್ಟಣದ ಸಾರ್ವಜನಿಕರು ಸದುಪಯೋಗಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮುಂಡರಗಿ ಪುರಸಭೆ ಕಾರ್ಯಾಲಯ ದೂರವಾಣಿ ಸಂಖ್ಯೆ 08371-262638 ಸಂಪರ್ಕಿಸಬಹುದಾಗಿದೆ ಎಂದು ಮುಂಡರಗಿ ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP