ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆ
ಬಳ್ಳಾರಿ, 01 ಜನವರಿ (ಹಿ.ಸ.) : ಆ್ಯಂಕರ್ : ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2026ರ ಅಂಗವಾಗಿ ಕೃಷಿ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆ ಜನವರಿ 02 ರ ಶುಕ್ರವಾರ ಬೆಳಿಗ್ಗೆ 10.30 ಗಂಟೆಗೆ ನಗರದ ಬಿ.ಡಿ.ಎ.ಎ ಆವರಣದಲ್ಲಿ ನಡೆಯಲಿ
ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆ


ಬಳ್ಳಾರಿ, 01 ಜನವರಿ (ಹಿ.ಸ.) :

ಆ್ಯಂಕರ್ : ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2026ರ ಅಂಗವಾಗಿ ಕೃಷಿ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆ ಜನವರಿ 02 ರ ಶುಕ್ರವಾರ ಬೆಳಿಗ್ಗೆ 10.30 ಗಂಟೆಗೆ ನಗರದ ಬಿ.ಡಿ.ಎ.ಎ ಆವರಣದಲ್ಲಿ ನಡೆಯಲಿದೆ.

ಪ್ರತಿ ಸ್ಪರ್ಧೆಗೆ ಒಂದೇ ತಿನಿಸು ಮಾಡಲು ಅವಕಾಶವಿದ್ದು, ಜಿಲ್ಲೆಯ ಎಲ್ಲಾ ಸಾರ್ವಜನಿಕರು ಭಾಗವಹಿಸಬಹುದು. ವಿದ್ಯಾರ್ಥಿಗಳು ಮತ್ತು ಕೃಷಿ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಲು ಅವಕಾಶವಿಲ್ಲ. ಹಿಂದಿನ ಸಾಲಿನಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ ಪಡೆದವರು ಮರೆತುಹೋದ ಖಾದ್ಯಗಳ ಪಾಕಸ್ಪರ್ಧೆಯಲ್ಲಿ ಭಾಗವಹಿಸಬಹುದು.

ಮನೆಯಲ್ಲೇ ತಯಾರಿಸಿದ ಸಿರಿಧಾನ್ಯದ ಖಾದ್ಯ ಪ್ರದರ್ಶಿಸುವುದಕ್ಕೆ ಬಳಸುವ ಸಾಮಗ್ರಿಗಳ ಮಾದರಿಗಳನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಒಂದು ಸಿಹಿ, ಖಾರ ಸಿರಿಧಾನ್ಯ ಖಾದ್ಯಗಳಿಗೆ ಮಾತ್ರ ಮತ್ತು ಮರೆತುಹೋದ ಖಾದ್ಯದ ತಿನಿಸನ್ನು ಆಯ್ಕೆ ಮಾಡಲಾಗುವುದು.

ಜಿಲ್ಲಾ ಮಟ್ಟಕ್ಕೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ ಸಿಹಿ, ಖಾರ (ಸಿರಿಧಾನ್ಯ ಖಾದ್ಯಗಳಿಗೆ ಮಾತ್ರ) ಮತ್ತು ಖಾದ್ಯದ ತಿನಿಸಿಗೆ ಬಹುಮಾನ ಕ್ರಮವಾಗಿ ರೂ.5000/-, 3000/- ಹಾಗೂ 2000/-ಗಳನ್ನು ನೀಡಲಾಗುವುದು.

ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಬಳ್ಳಾರಿ ದೂ.08392-276224, ಸಿರುಗುಪ್ಪ ಮೊ.827792800, ಸಂಡೂರು ಮೊ.8277927999 ಗೆ ಸಂಪರ್ಕಿಸಬಹುದು. ಎಂದು ಜಂಟಿ ಕೃಷಿ ನಿರ್ದೆಶಕ ಕೆ.ಎಂ. ಸೋಮಸುಂದರ್ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande