
ಗದಗ, 10 ಜನವರಿ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲೆಯ ನರಗುಂದ ವಿಧಾನ ಸಭಾ ಕ್ಷೇತ್ರದ ರೋಣ ತಾಲ್ಲೂಕಿನ ಅಸೂಟಿ ಗ್ರಾಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದಲ್ಲಿ ನಿರ್ಮಾಣವಾಗಲಿರುವ ವಿಶಿಷ್ಟ ಆರೋಗ್ಯ ಮತ್ತು ಕ್ಷೇಮ ಕೇಂದ್ರಕ್ಕೆ ಶಾಸಕ ಸಿ.ಸಿ. ಪಾಟೀಲ ಅವರು ಇಂದು ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಗ್ರಾಮೀಣ ಜನರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಈ ಕೇಂದ್ರವನ್ನು ಸ್ಥಾಪಿಸುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಇದೇ ವೇಳೆ ಅಸೂಟಿ ಗ್ರಾಮದ ವಿವಿಧ ಅಭಿವೃದ್ಧಿ ಕಾರ್ಯಗಳ ಪ್ರಗತಿಯನ್ನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ, ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa