
ತುಮಕೂರು, 10 ಜನವರಿ (ಹಿ.ಸ.) :
ಆ್ಯಂಕರ್ : ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಇಂದು ಆಯೋಜಿಸಿದ್ದ ಸಿದ್ಧಿ ಬಯೋದ ‘ವೆಕ್ಟೋ ಶೀಲ್ಡ್’ ಜೈವಿಕ ಕೀಟನಾಶಕ ಹಾಗೂ ಪುಸ್ತಕವನ್ನು ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವ ಸಚಿವ ವಿ.ಸೋಮಣ್ಣ ಬಿಡುಗಡೆ ಮಾಡಿದರು.
ಈ ವೇಳೆ ಮಾತನಾಡಿದ ಅವರು, ವೆಕ್ಟೋ ಶೀಲ್ಡ್ ಜೈವಿಕ ಸೊಳ್ಳೆ ಲಾರ್ವಾ ನಾಶಕವಾಗಿದ್ದು, ಸಾರ್ವಜನಿಕ ಆರೋಗ್ಯ ರಕ್ಷಣೆಗೆ ಬಳಸಬಹುದಾಗಿದೆ. ಡೆಂಗ್ಯೂ, ಮಲೇರಿಯಾ, ಚಿಕನ್‌ಗುನ್ಯಾ ಸೇರಿದಂತೆ ಸೊಳ್ಳೆಗಳಿಂದ ಹರಡುವ ರೋಗಗಳನ್ನು ತಡೆಗಟ್ಟುವಲ್ಲಿ ಈ ಕೀಟನಾಶಕ ಪರಿಣಾಮಕಾರಿಯಾಗಿದೆ ಎಂದರು.
ಸಿದ್ಧಲಿಂಗ ಮಹಾಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಸಮಾರಂಭದಲ್ಲಿ ಶಾಸಕರಾದ ಸುರೇಶ್ ಗೌಡ, ಜ್ಯೋತಿ ಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ರವಿ ಹೆಬ್ಬಾಕ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa