ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶಕ್ಕೆ ಮುಖ್ಯಮಂತ್ರಿ ಚಾಲನೆ
ಮಂಗಳೂರು, 10 ಜನವರಿ (ಹಿ.ಸ.) : ಆ್ಯಂಕರ್ : ಮಂಗಳೂರಿನ ಅತ್ತಾವರದ ಖಾಸಗಿ ಹೋಟೆಲ್ ನಲ್ಲಿ ಪ್ರವಾಸೋದ್ಯಮ ಇಲಾಖೆ ಮತ್ತು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲಾಡಳಿತಗಳ ಸಹಯೋಗದಲ್ಲಿ ನಡೆದ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ
Cm


ಮಂಗಳೂರು, 10 ಜನವರಿ (ಹಿ.ಸ.) :

ಆ್ಯಂಕರ್ : ಮಂಗಳೂರಿನ ಅತ್ತಾವರದ ಖಾಸಗಿ ಹೋಟೆಲ್ ನಲ್ಲಿ ಪ್ರವಾಸೋದ್ಯಮ ಇಲಾಖೆ ಮತ್ತು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲಾಡಳಿತಗಳ ಸಹಯೋಗದಲ್ಲಿ ನಡೆದ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿಗೆ ಕೈಜೋಡಿಸುತ್ತಿರುವ ಉದ್ಯಮಿಗಳ ಜೊತೆಗೆ ಒಡಂಬಡಿಕೆಯ ತಿಳುವಳಿಕೆಯ ಪತ್ರಗಳನ್ನು ಮುಖ್ಯಮಂತ್ರಿಗಳು ಹಸ್ತಾಂತರಿಸಿದರು.

ಈ ವೇಳೆ ವಿಧಾನಸಭೆ ಅಧ್ಯಕ ಯು.ಟಿ.ಖಾದರ್, ಪ್ರವಾಸೋದ್ಯಮ ಇಲಾಖೆ ಸಚಿವರಾದ ಎಚ್.ಕೆ. ಪಾಟೀಲ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯ, ಶಾಸಕರಾದ ಸತೀಶ್ ಸೈಲ್, ಗುರ್ಮೆ ಸುರೇಶ್ ಶೆಟ್ಟಿ, ರಾಜೇಗೌಡ, ಭೀಮಾ ನಾಯ್ಕ್, ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಾಸೀರ್ ಅಹಮದ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಫೂರ್, ನಿಗಮ ಮಂಡಳಿಗಳ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಹಿರಿಯ ಅಧಿಕಾರಿಗಳು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande