
ಮಂಗಳೂರು, 10 ಜನವರಿ (ಹಿ.ಸ.) :
ಆ್ಯಂಕರ್ : ಪ್ರವಾಸೋದ್ಯಮ ಇಲಾಖೆ ಹಾಗೂ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲಾಡಳಿತಗಳ ಸಹಯೋಗದಲ್ಲಿ ಮಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ಸರ್ಕಾರ ಸ್ಪಷ್ಟ ರೂಪುರೇಷೆಗಳನ್ನು ಸಿದ್ಧಪಡಿಸಿದ್ದು, ಮುಂದಿನ ದಿನಗಳಲ್ಲಿ ಈ ಪ್ರದೇಶಗಳಿಗೆ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಸಂಸದರಾದ ಬ್ರಿಜೇಶ್ ಚೌಟಾ ಮತ್ತು ವಿಶ್ವೇಶ್ವರ ಹೆಗಡೆ ಕಾಗೇರಿ, ಕರಾವಳಿ ಭಾಗದ ಶಾಸಕರು, ನಿಗಮ–ಮಂಡಳಿಗಳ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಹಿರಿಯ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa