
ಚಿತ್ರದುರ್ಗ, 10 ಜನವರಿ (ಹಿ.ಸ.) :
ಆ್ಯಂಕರ್ : ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳ ನಡುವೆ ಪರಿಣಾಮಕಾರಿ ಸಮನ್ವಯ ಅಗತ್ಯವಾಗಿದ್ದು, ದುರ್ಬಲ ಮತ್ತು ವಂಚಿತರಿಗೆ ಕಾಲಮಿತಿಯಲ್ಲಿ ನ್ಯಾಯ ದೊರಕಬೇಕು ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಅನು ಶಿವರಾಮನ್ ಹೇಳಿದರು.
ಚಿತ್ರದುರ್ಗದಲ್ಲಿ ನಡೆದ ರಾಜ್ಯಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾನೂನು ಸೇವಾ ಪ್ರಾಧಿಕಾರಗಳು ಮಾನವೀಯ ಕಳಕಳಿಯೊಂದಿಗೆ ಕಾರ್ಯನಿರ್ವಹಿಸಿ ನ್ಯಾಯವನ್ನು ಜನರ ಮನೆಬಾಗಿಲಿಗೆ ಕೊಂಡೊಯ್ಯಬೇಕು ಎಂದು ತಿಳಿಸಿದರು.
ನೊಂದವರಿಗೆ ಸಕಾಲದಲ್ಲಿ ನ್ಯಾಯ ಹಾಗೂ ಪರಿಹಾರ ದೊರಕದ ವ್ಯವಸ್ಥೆ ಬದಲಾಗಬೇಕೆಂದು ಒತ್ತಿ ಹೇಳಿದರು.
ನ್ಯಾಯಾಲಯ ಆದೇಶಗಳ ಶೀಘ್ರ ಜಾರಿಗೆ ಸೂಚಿಸಿದ ಅವರು, ರಾಜ್ಯ ಕಾನೂನು ಸೇವಾ ಪ್ರಾಧಿಕಾರದಲ್ಲಿ ಬಾಕಿಯಿರುವ ಶುಲ್ಕ ಹಾಗೂ ಸಂತ್ರಸ್ತರ ಪರಿಹಾರ ಮೊತ್ತಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡಬೇಕೆಂದು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa