ಕೇಂದ್ರ ಸರ್ಕಾರದ ನಿರ್ಧಾರ ಸಮರ್ಥಿಸಿಕೊಳ್ಳುವುದು ಮಹಾ ಅಪರಾಧ : ಮುಖ್ಯಮಂತ್ರಿ
ಖಾತರಿ
Cm


ಬೆಂಗಳೂರು, 10 ಜನವರಿ (ಹಿ.ಸ.) :

ಆ್ಯಂಕರ್ : ಬಿಜೆಪಿಯವರು ರಾಜ್ಯಕ್ಕೆ ಎಷ್ಟೇ ಅನ್ಯಾಯವಾದರೂ ಕೇಂದ್ರ ಸರ್ಕಾರ ಮಾಡಿದ್ದನ್ನೆಲ್ಲ ಸಮರ್ಥಿಸಿಕೊಳ್ಳುವುದು ಮಹಾ ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಇಂದು ರೇಸ್ ಕೋರ್ಸ್ ರಸ್ತೆಯ ಕೆಇಬಿ ಎಂಜಿನಿಯರ್ ಅಸೋಸಿಯೇಷನ್ ನಲ್ಲಿ ಕಾರ್ಯಕ್ರಮ ದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿ ಕರ್ನಾಟಕಕ್ಕೆ ಅನ್ಯಾಯವಾದದ್ದನೆಲ್ಲ ನ್ಯಾಯ ಎನ್ನುವುದು ಮಹಾ ಅಪರಾಧ ಎಂದರು.

ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆ ಕುರಿತಂತೆ ಚರ್ಚೆಗೆ ಆಹ್ವಾನಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಚರ್ಚೆಗೆ ನಾವು ಸಿದ್ಧವಾಗಿದ್ದು, ದೊಡ್ಡ ಆಂದೋಲನವನ್ನೇ ಮಾಡುತ್ತೇವೆ ಎಂದರು.

ಎಚ್. ಡಿ. ಕುಮಾರಸ್ವಾಮಿಯವರು ಅವರ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಲು ಮುಖ್ಯಮಂತ್ರಿ ನಿರಾಕರಿಸಿದರು. ಬಿಜೆಪಿ, ಜೆಡಿಎಸ್ ಅವರು ಕೇವಲ ಸುಳ್ಳು ಹೇಳುತ್ತಾರೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande