
ಕಲಬುರಗಿ, 10 ಜನವರಿ (ಹಿ.ಸ.) :
ಆ್ಯಂಕರ್ : ಕಲಬುರಗಿ ಜಿಲ್ಲೆ ಸೇಡಂ ಪಟ್ಟಣದಲ್ಲಿ ಜನವರಿ 12ರಂದು ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲು ಮತ್ತು ಉದ್ಘಾಟನಾ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಕಾರ್ಯಕ್ರಮ ನಡೆಯಲಿರುವ ಸ್ಥಳಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಭೇಟಿ ನೀಡಿ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು.
ಕಾರ್ಯಕ್ರಮದ ವ್ಯವಸ್ಥೆಗಳು, ವೇದಿಕೆ ನಿರ್ಮಾಣ, ಸಾರ್ವಜನಿಕ ಸೌಲಭ್ಯಗಳು ಹಾಗೂ ಭದ್ರತಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಚಿವರು ಚರ್ಚಿಸಿ ಅಗತ್ಯ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa