
ಬೆಂಗಳೂರು, 10 ಜನವರಿ (ಹಿ.ಸ.) :
ಆ್ಯಂಕರ್ : ಕಾರವಾರ-ಇಳಕಲ್ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆರಿಸಲು ಕ್ರಮ ವಹಿಸುವುದಾಗಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭರವಸೆ ನೀಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ತಮ್ಮ ಲೋಕ ಸಭಾ ವ್ಯಾಪ್ತಿಯಲ್ಲಿ ಬರುವ ಕಾರವಾರ ಇಳಕಲ್ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಮಾಡಿಕೊಂಡಿದ್ದ ಮನವಿಗೆ ಸ್ಪಂದಿಸಿರುವ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಕಾರವಾರ ಇಳಕಲ್ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಪತ್ರದ ಮೂಲಕ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa