
ಬೆಂಗಳೂರು, 10 ಜನವರಿ (ಹಿ.ಸ.) :
ಆ್ಯಂಕರ್ : ರಾಜ್ಯ ಸರ್ಕಾರಕ್ಕೆ ಮಾನಮರ್ಯಾದೆ ಎಂಬುದೇ ಇದ್ದಿದ್ದರೆ ದ್ವೇಷ ಭಾಷಣ ಮಸೂದೆಯನ್ನು ಮಂಡಿಸುವ ಧೈರ್ಯವೇ ಇರಲಿಲ್ಲ. ವಾಕ್ ಸ್ವಾತಂತ್ರ್ಯವನ್ನು ಕಸಿಯುವುದು ಕಾಂಗ್ರೆಸ್‌ನ ಮೂಲ ಚಾಳಿಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಅವರು ಕಟುವಾಗಿ ಟೀಕಿಸಿದರು.
ದ್ವೇಷ ಭಾಷಣ ಮಸೂದೆಗೆ ರಾಜ್ಯಪಾಲರು ತಡೆ ನೀಡಿರುವುದು ಉತ್ತಮ ವಿದ್ಯಮಾನ ಎಂದು ಅಭಿಪ್ರಾಯಪಟ್ಟ ಅವರು, ಇಂತಹ ಮಸೂದೆಗಳು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿವೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa