ರೈಲ್ವೆ, ಹೆದ್ದಾರಿ, ವಿಮಾನ ನಿಲ್ದಾಣ ಕಾಮಗಾರಿಗಳ ಕುರಿತು ಸಂಸದ ಶೆಟ್ಟರ್ ಸಭೆ
ಬೆಳಗಾವಿ, 10 ಜನವರಿ (ಹಿ.ಸ.) : ಆ್ಯಂಕರ್ : ಬೆಳಗಾವಿ ಜಿಲ್ಲಾಧಿಕಾರಿ ಮಹಮ್ಮದ್ ರೋಶನ್ ಅವರ ಉಪಸ್ಥಿತಿಯಲ್ಲಿ ಸಂಸದ ಜಗದೀಶ್ ಶೆಟ್ಟರ್ ಅವರು ಕೇಂದ್ರ ಸರ್ಕಾರದ ರೈಲ್ವೆ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ವಿಮಾನ ನಿಲ್ದಾಣ ಇಲಾಖೆಗಳ ಅಧಿಕಾರಿಗಳೊಂದಿಗೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರ
Meeting


ಬೆಳಗಾವಿ, 10 ಜನವರಿ (ಹಿ.ಸ.) :

ಆ್ಯಂಕರ್ : ಬೆಳಗಾವಿ ಜಿಲ್ಲಾಧಿಕಾರಿ ಮಹಮ್ಮದ್ ರೋಶನ್ ಅವರ ಉಪಸ್ಥಿತಿಯಲ್ಲಿ ಸಂಸದ ಜಗದೀಶ್ ಶೆಟ್ಟರ್ ಅವರು ಕೇಂದ್ರ ಸರ್ಕಾರದ ರೈಲ್ವೆ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ವಿಮಾನ ನಿಲ್ದಾಣ ಇಲಾಖೆಗಳ ಅಧಿಕಾರಿಗಳೊಂದಿಗೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಸಭೆಯಲ್ಲಿ ಬೆಳಗಾವಿ–ಕಿತ್ತೂರು–ಧಾರವಾಡ ನೂತನ ರೈಲು ಮಾರ್ಗಕ್ಕೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆ, ಟಿಳಕವಾಡಿ ಹಾಗೂ ಖಾನಾಪೂರ ಬಳಿ ರಸ್ತೆ ಮೇಲ್ಸೇತುವೆ ನಿರ್ಮಾಣದಲ್ಲಿನ ಅಡೆತಡೆಗಳು, ಸುಳೇಭಾವಿ ಗ್ರಾಮದಲ್ಲಿ ರೈತರಿಗೆ ಉಂಟಾಗಿರುವ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು. ಅಗತ್ಯ ಅನುಮೋದನೆಗಳನ್ನು ಶೀಘ್ರ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಬೆಳಗಾವಿ–ಸಂಕೇಶ್ವರ ಆರು ಪಥದ ರಾಷ್ಟ್ರೀಯ ಹೆದ್ದಾರಿ ಹಾಗೂ ಹಳಗಾ–ಮಚ್ಚೆ ಬೈಪಾಸ್ ರಸ್ತೆ ಕಾಮಗಾರಿ ವಿಳಂಬದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಂಸದರು, ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬೆಳಗಾವಿ–ಹುನಗುಂದ–ರಾಯಚೂರು ರಸ್ತೆ ಯೋಜನೆಯ ಭೂಸ್ವಾಧೀನ ಪ್ರಗತಿಯ ಕುರಿತಾಗಿಯೂ ಮಾಹಿತಿ ಪಡೆದರು.

ಬೆಳಗಾವಿ ವಿಮಾನ ನಿಲ್ದಾಣ ಅಭಿವೃದ್ಧಿಗೆ ವಾಯುಸೇನೆಯಿಂದ ಭೂಮಿ ಹಸ್ತಾಂತರ ವಿಳಂಬವಾಗುತ್ತಿರುವ ವಿಷಯವನ್ನು ರಕ್ಷಣಾ ಸಚಿವರ ಗಮನಕ್ಕೆ ತರುವುದಾಗಿ ಸಂಸದರು ತಿಳಿಸಿದರು.

ಸಭೆಯಲ್ಲಿ ವಿಶೇಷ ಭೂಸ್ವಾಧೀನ ಅಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ವಿಮಾನಯಾನ ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande