ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಸೋಮಣ್ಣ
ತುಮಕೂರು, 10 ಜನವರಿ (ಹಿ.ಸ.) : ಆ್ಯಂಕರ್ : ತುಮಕೂರಿನಲ್ಲಿರುವ ಸಂಸದರ ಕಚೇರಿಯಲ್ಲಿ ಕೇಂದ್ರ ಸಚಿವ ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ರೈಲ್ವೆ ಅಧಿಕಾರಿಗಳೊಂದಿಗೆ ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ತುಮಕೂರು ಲೋಕ ಸಭಾ ಕ್ಷೇತ್ರ ಹಾಗೂ ಸುತ್ತಮುತ್ತಲಿನ ಪ
Meeting


ತುಮಕೂರು, 10 ಜನವರಿ (ಹಿ.ಸ.) :

ಆ್ಯಂಕರ್ : ತುಮಕೂರಿನಲ್ಲಿರುವ ಸಂಸದರ ಕಚೇರಿಯಲ್ಲಿ ಕೇಂದ್ರ ಸಚಿವ ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ರೈಲ್ವೆ ಅಧಿಕಾರಿಗಳೊಂದಿಗೆ ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಸಭೆಯಲ್ಲಿ ತುಮಕೂರು ಲೋಕ ಸಭಾ ಕ್ಷೇತ್ರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುತ್ತಿರುವ ಹಾಗೂ ಪ್ರಸ್ತಾವಿತ ರೈಲ್ವೆ ಯೋಜನೆಗಳ ಸ್ಥಿತಿ, ಕಾಮಗಾರಿಗಳ ವೇಗ, ಭೂಸ್ವಾಧೀನ ಪ್ರಕ್ರಿಯೆ, ಪ್ರಯಾಣಿಕರ ಸೌಲಭ್ಯ ವೃದ್ಧಿ ಸೇರಿದಂತೆ ಹಲವು ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು.

ಯೋಜನೆಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವಂತೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಗುಣಮಟ್ಟದ ಕಾಮಗಾರಿಯನ್ನು ಕೈಗೊಳ್ಳುವಂತೆ ಸಚಿವ ಸೋಮಣ್ಣ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೆ, ಯಾವುದೇ ಅಡಚಣೆಗಳು ಇದ್ದಲ್ಲಿ ತಕ್ಷಣವೇ ಪರಿಹಾರ ಕ್ರಮ ಕೈಗೊಳ್ಳುವಂತೆ ಅವರು ತಿಳಿಸಿದರು.

ಸಭೆಯಲ್ಲಿ ಹಿರಿಯ ರೈಲ್ವೆ ಅಧಿಕಾರಿಗಳು, ಸಂಬಂಧಿಸಿದ ಇಲಾಖೆಯ ಪ್ರತಿನಿಧಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande