ಮಾರ್ಚ 14 ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜನೆ
ಧಾರವಾಡ, 10 ಜನವರಿ (ಹಿ.ಸ.) : ಆ್ಯಂಕರ್ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ರಾಜ್ಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಮಾರ್ಚ 14, 2026 ರಂದು ರಾಷ್ಟ್ರೀಯ ಲೋಕ ಅದಾಲತ್‍ನ್ನು ಆಯೋಜಿಸಲಾಗುತ್ತಿದೆ. ಇಲಾಖೆಗಳ ಅಧಿಕಾರಿಗಳು
ಮಾರ್ಚ 14 ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜನೆ


ಧಾರವಾಡ, 10 ಜನವರಿ (ಹಿ.ಸ.) :

ಆ್ಯಂಕರ್ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ರಾಜ್ಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಮಾರ್ಚ 14, 2026 ರಂದು ರಾಷ್ಟ್ರೀಯ ಲೋಕ ಅದಾಲತ್‍ನ್ನು ಆಯೋಜಿಸಲಾಗುತ್ತಿದೆ.

ಇಲಾಖೆಗಳ ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಯಲ್ಲಿ ಬರುವ ಅಧಿಕಾರಿಗಳಿಗೆ ಧಾರವಾಡ ಜಿಲ್ಲೆಯಲ್ಲಿರುವ ಎಲ್ಲಾ ನ್ಯಾಯಾಲಯಗಳಲ್ಲಿ ಮಾರ್ಚ 14, 2026 ರಂದು ರಾಷ್ಟ್ರೀಯ ಲೋಕ ಅದಾಲತ್‍ನ್ನು ಆಯೋಜಿಸಿರುವ ಕುರಿತು ಮಾಹಿತಿಯನ್ನು ನೀಡಲು ಹಾಗೂ ಸಾಧ್ಯವಾದಷ್ಟು ಸದರಿ ಲೋಕ ಅದಾಲತ್‍ನಲ್ಲಿ ಪೂರ್ವವ್ಯಾಜ್ಯ ಪ್ರಕರಣಗಳು ಹಾಗೂ ನ್ಯಾಯಾಲಯಗಳಲ್ಲಿ ರಾಜಿ ಆಗಬಹುದಾದ ಪ್ರಕರಣಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ರಾಜಿ ಸಂದಾನ ಮಾಡಿಕೊಳ್ಳಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ನಿರ್ದೇಶಿಸಿರುತ್ತಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಸಿವಿಲ್ ನ್ಯಾಯಾಧೀಶರಾದ ಪಿ.ಎಫ್.ದೊಡ್ಡಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande